ರಜತ ಮಹೋತ್ಸವ ಆಚರಣೆ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಹಾಗೂ ಪಾರ್ಕಿಂಗ್ ವ್ಯವಸ್ಥೆ
ಉಡುಪಿ: ಉಡುಪಿ ಜಿಲ್ಲೆ 25 ವರ್ಷ ಪೂರೈಸಿದ ಹಿನ್ನೆಲೆ ಆಗಸ್ಟ್ 25 ರಂದು ರಜತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯದ ಗೌರವಾನ್ವಿತ ರಾಜ್ಯಪಾಲರ ಆಗಮನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನಗರದಲ್ಲಿ ಸಾರ್ವಜನಿಕರ ಸುಗಮ ಸಂಚಾರದ ವ್ಯವಸ್ಥೆಯಲ್ಲಿ ಈ ಕೆಳಕಂಡಂತೆ ಬದಲಾವಣೆ ಮಾಡಲಾಗಿದೆ. ಅಜ್ಜರಕಾಡು ಮೈದಾನ ಮುಂಭಾಗಕ್ಕೆ ಜಿಲ್ಲಾಡಳಿತದಿಂದ ನೀಡಲಾದ ಪಾಸ್ ಇರುವ ವಿಐಪಿ ವಾಹನಗಳಿಗೆ ಪುರಭವನದ ಪಕ್ಕದ ರಸ್ತೆಯಲ್ಲಿ, ಕಾರ್ಯಕ್ರಮಕ್ಕೆ ಆಗಮಿಸುವ ಕುಂದಾಪುರ, ಮಲ್ಪೆ, ಕಾಪು ಹಾಗೂ ಪಡುಬಿದ್ರೆ ಕಡೆಯಿಂದ ಆಗಮಿಸುವ ಸಾರ್ವಜನಿಕರ ವಾಹನಗಳಿಗೆ ಸೈಂಟ್ ಸಿಸಿಲಿ […]
ಆಗಸ್ಟ್ 25 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲೆ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ
ಉಡುಪಿ: ಜಿಲ್ಲಾಡಳಿತ ಉಡುಪಿ ಇವರ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಆಗಸ್ಟ್ 25 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಲಾಂಛನವನ್ನು ಶಾಸಕ ಕೆ.ರಘುಪತಿ ಭಟ್ ಹಾಗೂ ವೆಬ್‌ಸೈಟ್‌ನ್ನು ಶಾಸಕ ಲಾಲಾಜಿ ಆರ್ ಮೆಂಡನ್ ಅವರು ಸೋಮವಾರ ರಜತಾದ್ರಿಯ […]
ಸೆಪ್ಟಂಬರ್ 3 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟಂಬರ್ 3 ರಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ, ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಸ್ಪರ್ಧೆಗಳ ವಿವರ: ಪುರುಷರಿಗೆ: 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ ಓಟ, ಉದ್ದ ಜಿಗಿತ, ಎತ್ತರಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110ಮೀ ಹರ್ಡಲ್ಸ್, 4*100ಮೀ ರಿಲೇ, 4*400ಮೀ […]