ಧ್ವಜ ಸಂಹಿತೆಯ ಅನುಸಾರ ಮಸೀದಿ-ಮದ್ರಸಾಗಳಲ್ಲಿ ಧ್ವಜ ಹಾರಿಸಿ: ಜಿಲ್ಲಾ ವಕ್ಫ್ ಸಲಹಾ ಸಮಿತಿ ಕರೆ
ಉಡುಪಿ: ಜಿಲ್ಲಾ ಮಟ್ಟದ ಆಜಾದೀ ಕಾ ಅಮೃತ್ ಮಹೋತ್ಸವದ ಅಂಗವಾಗಿ ಜಿಲ್ಲೆಯಲ್ಲಿರುವ ಎಲ್ಲಾ ಮಸೀದಿ ಮತ್ತು ಮದ್ರಸಾಗಳಲ್ಲಿ ಧ್ವಜ ಸಂಹಿತೆಯ ಅನುಸಾರವೆ ರಾಷ್ಟ್ರ ಧ್ವಜವನ್ನು ಹಾರಿಸುವಂತೆ ಹಾಗೂ ರಾಷ್ಟ್ರಧ್ವಜಕ್ಕೆ ಅಗೌರವ ಉಂಟಾಗದಂತೆ ಕ್ರಮವಹಿಸುವಂತೆ ಎಲ್ಲಾ ವಕ್ಫ್ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಆಡಳಿತಾಧಿಕಾರಿಗಳಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಸಿ.ಹೆಚ್. ಅಬ್ದುಲ್ ಮುತ್ತಾಲಿ ತಿಳಿಸಿರುತ್ತಾರೆ.