ರಕ್ತದ ಕಾಂಡಕೋಶ ದಾನ ಜಾಗೃತಿ ಮೂಡಿಸಲು ಮಣಿಪಾಲ್ ಮ್ಯಾರಥಾನ್ ಜೊತೆಗೆ ಡಿಕೆಎಂಎಸ್-ಬಿಎಂಎಸ್‌ಟಿ ಸಹಭಾಗಿತ್ವ
ಬೆಂಗಳೂರು: ರಕ್ತದ ಕ್ಯಾನ್ಸರ್ ಮತ್ತು ರಕ್ತದ ಕಾಂಡಕೋಶ (ಬ್ಲಡ್ ಸ್ಟೆಮ್ ಸೆಲ್) ದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಯಂಸೇವಾ ಸಂಸ್ಥೆ ಡಿಕೆಎಂಎಸ್ ಬಿಎಂಎಸ್‌ಟಿ (DKMS-BMST) ಫೌಂಡೇಶನ್ ಇಂಡಿಯಾ, ಮಣಿಪಾಲ್ ಮ್ಯಾರಥಾನ್ 2024ರ (manipal Marathon) ಜೊತೆಗೆ ಕೈಜೋಡಿಸಿದೆ. ಮ್ಯಾರಥಾನ್‌ನಲ್ಲಿ ಸುಮಾರು ಹತ್ತು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು, ಜೀವ ಉಳಿಸುವ ರಕ್ತಕಾಂಡ ಕೋಶದ ದಾನಿಗಳನ್ನು ನೋಂದಣಿ ಮಾಡಿಕೊಳ್ಳುವ ಗುರಿಯನ್ನು ಸಂಸ್ಥೆಯು ಹೊಂದಿದೆ. ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಶನ್‌ನ ಸಹಭಾಗಿತ್ವದಲ್ಲಿ ಮಣಿಪಾಲ ಅಕಾಡೆಮಿ ಆಫ್ […]