ಹಿರಿಯರ ಮಾತಿಗೆ ಬೆಲೆ ಕೊಟ್ಟು ತಲೆಬಾಗಬೇಕಾಯಿತು; ತಾಳ್ಮೆ ಕಾಯ್ದುಕೊಳ್ಳಿ: ಅಭಿಮಾನಿಗಳಿಗೆ ಡಿಕೆಶಿ ಕರೆ
ಕನಕಪುರ: ಮುಖ್ಯಮಂತ್ರಿ ಪಟ್ಟಕ್ಕಾಗಿ ತಮ್ಮ ಆಕಾಂಕ್ಷೆಗಳನ್ನು ಜೀವಂತವಾಗಿರಿಸಿಕೊಂಡಿರುವ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಬೆಂಬಲಿಗರನ್ನು ಉದ್ದೇಶಿಸಿ “ತಾಳ್ಮೆಯಿಂದ” ಇರಿ ಮತ್ತು “ನಿರಾಶೆಗೊಳ್ಳಬೇಡಿ” ಎಂದು ಕೇಳಿಕೊಂಡಿದ್ದಾರೆ. ದೊಡ್ಡ ಜವಾಬ್ದಾರಿಯಾದ ಮುಖ್ಯಮಂತ್ರಿ ಹುದ್ದೆ ಸಿಗುತ್ತದೆ ಎಂದು ನೀವೆಲ್ಲರೂ ಭಾವಿಸಿ ಪ್ರೀತಿಯ ಸುರಿಮಳೆಗೈದಿದ್ದೀರಿ, ಯಾರೂ ನಿರಾಶರಾಗುವ ಅಗತ್ಯವಿಲ್ಲ ಎಂದು ಶನಿವಾರ ತಮ್ಮ ಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹೇಳಿದ್ದಾರೆ. ತಮ್ಮನ್ನು ಅಧಿಕಾರಕ್ಕೆ ತಂದ ಮತದಾರರಿಗೆ ಅವರು ಧನ್ಯವಾದ ಅರ್ಪಿಸಿ ಮಾತನಾಡಿ, ನನ್ನನ್ನು ಮುಖ್ಯಮಂತ್ರಿಯನ್ನಾಗಿ […]