ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆ ಸಮಾರೋಪ ಸಮಾರಂಭ
ಕುಂದಾಪುರ: ವಿದ್ಯಾರ್ಥಿಗಳಲ್ಲಿನ ಕಲೆ-ಸಾಹಿತ್ಯದ ಕುರಿತಾದ ಆಸಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸುವುದೇ ಪ್ರತಿಭಾ ದಿನಾಚರಣೆಯ ಉದ್ದೇಶ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಸ್ಪರ್ಧೆ- ಬಹುಮಾನಕ್ಕೆ ಸೀಮಿತವಾಗಿರಿಸದೆ, ಕಲೆಯಲ್ಲೇ ಬದುಕನ್ನು ಕಟ್ಟಿಕೊಳ್ಳುವಂತಾಗಬೇಕು ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತೀರ್ಪುಗಾರರಾದ ಭಂಡಾರ್‍ಕಾರ್ಸ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಡಾ. ಯಶವಂತಿ ಕೆ., ನಾವುಂದ ಸರಕಾರಿ ಪದವಿ […]