ಗಂಗಾ ಕಲ್ಯಾಣ ಯೋಜನೆಯಡಿ ಪ.ಜಾತಿ/ ಪ.ಪಂಗಡದ ಕೊಳವೆ ಬಾವಿ ನಿರ್ಮಾಣಕ್ಕೆ ನೇರ ಹಣ ಪಾವತಿ: ಕೋಟ

ಉಡುಪಿ: ಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ್ ಅಭಿವೃದ್ದಿ ನಿಗಮ ಸೇರಿದಂತೆ 7 ವಿವಿಧ ನಿಗಮಗಳ ಮೂಲಕ ಗಂಗಾ ಕಲ್ಯಾಣ ಯೋಜನೆಯಡಿ ಒಟ್ಟು 17000 ಕೊಳವೆ ಬಾವಿಗಳನ್ನು ಕೊರೆಯಲು ಹಣವನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಅವರು ಅನಾರೋಗ್ಯದ ಕಾರಣ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಶುಕ್ರವಾರದಂದು ಅಲ್ಲಿಂದಲೇ ಸಮಾಜ ಕಲ್ಯಾಣ ಇಲಾಖೆಯ ವಿವಿಧ […]

ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ

ಹೆಬ್ರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು. ಮುನಿಯಾಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಆಚಾರ್ಯ ಮಾತನಾಡಿ, ಶಿಕ್ಷಣದಿಂದ ಸಮಾಜದಲ್ಲಿ ಸಮಾನತೆ ಸಾಧ್ಯ. ಅವಕಾಶ ವಂಚಿತ ಸಮುದಾಯಗಳಲ್ಲಿನ ವ್ಯಕ್ತಿಗಳನ್ನು ಮುಖ್ಯಭೂಮಿಕೆಗೆ ಕರೆತರುವಲ್ಲಿ ಶಿಕ್ಷಣದ ಪಾತ್ರ ಮಹತ್ವ. ಶಿಕ್ಷಣದಿಂದ ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಪ್ರತಿಯೊಬ್ಬರಲ್ಲೂ […]

ಮೇ 29: ಕನ್ನರ್ಪಾಡಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನ ಉದ್ಘಾಟನಾ ಕಾರ್ಯಕ್ರಮ

ಉಡುಪಿ: ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಉಡುಪಿ ಹಾಗೂ ಕಡೆಕಾರ್ ಗ್ರಾಮ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ  ಡಾ. ಬಿ.ಆರ್  ಅಂಬೇಡ್ಕರ್ ಭವನ ಉದ್ಘಾಟನಾ ಸಮಾರಂಭವು ಮೇ 29 ರಂದು ಬೆಳಗ್ಗೆ 11.30 ಕ್ಕೆ ಕನ್ನರ್ಪಾಡಿ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅಂಬೇಡ್ಕರ್ ಭವನದ ಉದ್ಘಾಟನೆ ನೆರವೇರಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ […]

ಡಾ. ಬಿ. ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಸಾರ್ವಕಾಲಿಕ ಮಾರ್ಗದರ್ಶಿ ಸೂತ್ರಗಳಾಗಿವೆ: ಲಾಲಾಜಿ ಆರ್. ಮೆಂಡನ್

ಉಡುಪಿ: ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್‍ರವರ ವಿಚಾರಧಾರೆಗಳು ಸಾರ್ವಕಾಲಿಕ ಮಾರ್ಗದರ್ಶಿ ಸೂತ್ರಗಳಾಗಿದ್ದು, ಪ್ರಸ್ತುತ ಸನ್ನಿವೇಶದಲ್ಲಿ ಈ ಕುರಿತು ಅವಲೋಕಿಸುವ ಅನಿವಾರ್ಯತೆಯಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅಭಿಪ್ರಾಯಪಟ್ಟರು. ಅವರು ಮಂಗಳವಾರ ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಡಾ. ಬಿ. ಆರ್. ಅಂಬೇಡ್ಕರ್‍ರವರ ವಿಚಾರಧಾರೆ ಕುರಿತು […]