ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯದ ಮಹತ್ವದ ಕುರಿತು ಅರಿವು ಕಾರ್ಯಕ್ರಮ

ಉಡುಪಿ: ಅಜ್ಜರಕಾಡಿನ ವಿದ್ಯಾ ವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಆ. 18 ರಂದು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯ ಮತ್ತು ಡಿಜಿಟಲ್ ಗ್ರಂಥಾಲಯ ಹಾಗೂ ಗ್ರಂಥಗಳ ಮಹತ್ವದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ವಸಂತಿ ಶೆಟ್ಟಿ ಉದ್ಘಾಟಿಸಿದರು. ಬಳಿಕ ಗ್ರಂಥಾಲಯ ಮತ್ತು ಗ್ರಂಥಗಳ ಮಹತ್ವದ ಬಗ್ಗೆ ಉಪನ್ಯಾಸವನ್ನು ನೀಡಿದ ಅವರು, ಜ್ಞಾನದೇಗುಲಗಳಾದ ಗ್ರಂಥಾಲಯದ ಸದ್ಬಳಕೆ ಮಾಡಿಕೊಂಡರೆ ಜೀವನದ ಅಂಧಕಾರವು ದೂರಾವಾಗಿ ಜ್ಞಾನವೆಂಬ ಬೆಳಕು ನಮ್ಮ ಜೀವನದಲ್ಲಿ ನೆಲೆಗೊಳ್ಳುತ್ತದೆ. ಆದುದರಿಂದ […]

ಕೇಂದ್ರ ಗ್ರಂಥಾಲಯದಲ್ಲಿ ಸಂವಿಧಾನ ದಿನಾಚರಣೆ

ಉಡುಪಿ: ವಿದ್ಯಾ ವಾಚಸ್ಪತಿ ಡಾ ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಶನಿವಾರ ಭಾರತದ ಸಂವಿಧಾನ ದಿನಾಚರಣೆ ನಡೆಯಿತು. ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರರ ವೇದ ವಾಕ್ಯದಂತೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬಂತೆ ಸಂವಿಧಾನವು 1949 ನವೆಂಬರ್ 26 ರಂದು ಸಮರ್ಪಣೆಯಾಗಿರುತ್ತದೆ. ಕಾರ್ಯಕ್ರಮವನ್ನು ಸಾಹಿತಿ ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಉದ್ಘಾಟಿಸಿದರು. ಭಾರತ ಸಂವಿಧಾನದ ಬಗ್ಗೆ ಚರ್ಚಾಕೂಟದಲ್ಲಿ ಮಾತನಾಡಿದ ಮಹಾಲಿಂಗ ಕಲ್ಕುಂದ , […]

ನಗರ ಕೇಂದ್ರ ಗ್ರಂಥಾಲಯದಲ್ಲಿ ಡಿಜಿಟಲ್ ಗ್ರಂಥಾಲಯ ಕಾರ್ಯಾಗಾರ

ಉಡುಪಿ: ಜ್ಞಾನವೃದ್ಧಿಗಾಗಿ ಗ್ರಂಥಾಲಯ ಅಗತ್ಯವಾಗಿದ್ದು, ದೇಶಕ್ಕೆ ಮಾದರಿಯಾಗಿರುವ ಉಡುಪಿ ಗ್ರಂಥಾಲಯದ ಸೌಲಭ್ಯವನ್ನು ಉಡುಪಿಯ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ದುಬಾರಿ ಶುಲ್ಕ ನೀಡಿ, ದೂರದ ಊರುಗಳಲ್ಲಿ ಐಎಎಸ್, ಕೆಎಎಸ್ ಪಡೆಯುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ನೆಲೆಯಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಇಲ್ಲಿಗೆ ಕರೆಸಿ ಕೋಚಿಂಗ್ ಶಿಬಿರಗಳನ್ನು ಆಯೋಜಿಸಬೇಕು ಎಂದು ಗ್ರಂಥಾಲಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಕೆ. ರಘುಪತಿ ಭಟ್ ಸೂಚಿಸಿದರು. ಅವರು ಬುಧವಾರ ಅಜ್ಜರಕಾಡಿನ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ […]

ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ

ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ ಮತ್ತು ರಾಜಾ ರಾಮ್ ಮೋಹನ್ ರಾಯ್ ಗ್ರಂಥಾಲಯ ಪ್ರತಿಷ್ಠಾನ ಕೋಲ್ಕತ್ತಾ ಇವರ ಸಂಯುಕ್ತ ಆಶ್ರಯದಲ್ಲಿ ಆಧುನಿಕ ಭಾರತದ ಪಿತಾಮಹ ರಾಜಾರಾಮ್ ಮೋಹನ್ ರಾಯ್ ಅವರ ಜನ್ಮ ದಿನೋತ್ಸವ ಪ್ರಯುಕ್ತ ಮಹಿಳಾ ಸಬಲೀಕರಣದ ಕುರಿತು ವಿದ್ಯಾರ್ಥಿಗಳಿಂದ ಜಾಥಾ, ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಮತ್ತು ಡಿಜಿಟಲ್ ಸದಸ್ಯತ್ವ ಅಭಿಯಾನ ಉತ್ತಮ ಸಿಬ್ಬಂದಿ/ ಉತ್ತಮ ಓದುಗ ಸೇವಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭವು ಅಜ್ಜರಕಾಡು ವಿದ್ಯಾ ವಾಚಸ್ಪತಿ ಡಾ. […]