ಸಿದ್ದರಾಮಯ್ಯನವರನ್ನು ಹೊಡೆದು ಹಾಕಿ ಎಂದ ಅಶ್ವಥ್ ನಾರಾಯಣ್ ವಿರುದ್ದ ಪ್ರಕರಣ ದಾಖಲಿಸಿ: ವೆರೋನಿಕಾ ಕರ್ನೆಲಿಯೋ ಒತ್ತಾಯ
ರಾಜ್ಯದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎನ್ನುವ ಮೂಲಕ ಪ್ರಚೋದನಾತ್ಮಕವಾಗಿ ಮಾತನಾಡಿದ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ್ ಅವರ ವಿರುದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ. ರಾಜ್ಯಕ್ಕೆ ಉತ್ತಮ ಜನಪರ ಆಡಳಿತ ನೀಡಿರುವ ಹಿರಿಯ ರಾಜಕಾರಣಿ ಸಿದ್ದರಾಮಯ್ಯ ಅವರ ವಿರುದ್ದ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ್ ಮಾತನಾಡಿದ ಪದಗಳನ್ನು ಯಾರೂ ಕೂಡ […]
ರಾಷ್ಟ್ರಮಟ್ಟದ ಬಯೋಕ್ವಿಜ್ ರಸಪ್ರಶ್ನೆಯಲ್ಲಿ ಮಾಹೆ ವಿದ್ಯಾರ್ಥಿನಿ ಮೈಥಿಲಿ ಪದವು ಪ್ರಥಮ
ಮಣಿಪಾಲ: ಮಾಹೆಯ ಮಣಿಪಾಲ್ ಸ್ಕೂಲ್ ಆಫ್ ಸೈನ್ಸಸ್ ನ ಬಿ.ಎಸ್ಸಿ ಬಯೋಟೆಕ್ನಾಲಜಿಯ 5ನೇ ಸೆಮೆಸ್ಟರ್ ನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿ ಮೈಥಿಲಿ ಪದವು ರಾಷ್ಟ್ರ ಮಟ್ಟದ ರಸಪ್ರಶ್ನೆ ಸ್ಪರ್ಧೆ ‘ಬಯೋಕ್ವಿಜ್-2022’ ರ ಅಂತಿಮ ಸುತ್ತಿನಲ್ಲಿ ವಿಜೇತರಾಗಿ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಜ್ಯ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ಎಸ್ & ಟಿ ಇಲಾಖೆಯಿಂದ ಆಯೋಜಿಸಲಾಗಿದದ್ದ ರಾಷ್ಟ್ರ ಮಟ್ಟದ ರಸಪ್ರಶ್ನೆ ಕಾರ್ಯಕ್ರಮವು ಏಷ್ಯಾದ ಅತ್ಯಂತ ಪ್ರತಿಷ್ಠಿತ ಬೆಂಗಳೂರು ಟೆಕ್ ಶೃಂಗಸಭೆಯ ಭಾಗವಾಗಿತ್ತು. ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ […]