ಔದ್ಯೋಗಿಕ ಜೀವನದಲ್ಲಿ ಹೊಂದಾಣಿಕೆಗಾಗಿ ಮೃದು ಕೌಶಲ್ಯ ಅತ್ಯವಶ್ಯಕ: ಡಾ. ಜಿ. ರಾಬರ್ಟ್ ಕ್ಲೈವ್
ಉಡುಪಿ: ಮೃದು ಕೌಶಲ್ಯ(ಸಾಫ್ಟ್ ಸ್ಕಿಲ್) ಗಳನ್ನು ವಿದ್ಯಾರ್ಥಿ ಜೀವನದಲ್ಲಿಯೇ ಅಳವಡಿಸಿಕೊಳ್ಳುವುದರಿಂದ ವೃತ್ತಿಪರ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಕೆಲಸದ ಒತ್ತಡ ಮತ್ತು ಪರಿಸರದಲ್ಲಿ ಹೊಂದಿಕೊಂಡು ಹೋಗಲು ಮೃದು ಕೌಶಲ್ಯಗಳು ಸಹಾಯ ಮಾಡುತ್ತದೆ ಎಂದು ಬ್ರಹ್ಮಾವರ ಕ್ರಾಸ್ ಲ್ಯಾಂಡ್ ಕಾಲೇಜಿನ ಗ್ರಾಮೀಣಾಭಿವೃದ್ಧಿ ವಿಭಾಗದ ಸಹ ಪ್ರಾಧ್ಯಾಪಕ ಡಾ. ಜಿ. ರಾಬರ್ಟ್ ಕ್ಲೈವ್ ಹೇಳಿದರು. ನಗರದ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಗ್ರಾಮೀಣ ಅಭಿವೃದ್ಧಿ ವಿಭಾಗ ಮತ್ತು […]
ಶಾಲಾ-ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಿ: ಪ್ರೊ. ಭಾಸ್ಕರ್ ಶೆಟ್ಟಿ
ಉಡುಪಿ: ವಿದ್ಯಾರ್ಥಿಗಳಲ್ಲಿ ಸೇವಾಮನೋಭಾವನೆಯನ್ನು ಶಾಲಾ-ಕಾಲೇಜು ಹಂತದಲ್ಲಿಯೇ ಮೂಡಿಸಬೇಕು. ಯುವರೆಡ್‌ಕ್ರಾಸ್ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುವಂತೆ ತಿಳಿಸಿದ ಅವರು, ತರಬೇತಿ ಪಡೆದ ತರಬೇತುದಾರರು ಸಮಾಜಮುಖಿ ವಾತಾವರಣವನ್ನು ಸೃಷ್ಠಿಸುವುದರ ಮೂಲಕ ರೆಡ್‌ಕ್ರಾಸ್ ಸಂಸ್ಥೆಯನ್ನು ಜಿಲ್ಲೆಯಾದ್ಯಂತ ಅದ್ವಿತೀಯ ಸಂಸ್ಥೆಯನ್ನಾಗಿ ರೂಪಿಸಿ ಎಂದು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಪ್ರೊ.ಭಾಸ್ಕರ್ ಶೆಟ್ಟಿ ಹೇಳಿದರು. ಅವರು ಗುರುವಾರ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಂಟ್ ಹಾಲ್‌ನಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರೆಡ್‌ಕ್ರಾಸ್ ಸೊಸೈಟಿ […]
ವಿದ್ಯಾರ್ಥಿ ದೆಸೆಯಲ್ಲಿಯೇ ಸಾಹಿತ್ಯಾಸಕ್ತಿ ಬೆಳೆಸಿಕೊಂಡಲ್ಲಿ ವಿಶೇಷ ಆನಂದ ಪ್ರಾಪ್ತಿ: ಮುರಳೀಧರ ಉಪಾಧ್ಯ
ಉಡುಪಿ: ಒಳ್ಳೆಯ ಓದು ಒಳ್ಳೆಯ ಬರವಣಿಗೆಗೆ ಪ್ರೇರಣೆಯನ್ನು ನಿಡುತ್ತದೆ. ವಿದ್ಯಾರ್ಥಿ ಜೀವನದಲ್ಲಿಯೇ ಬರವಣಿಗೆಯ ಹವ್ಯಾಸವನ್ನು ಮೈಗೂಡಿಸಿಕೊಳ್ಳಬೇಕು. ಸಾಹಿತ್ಯವನ್ನು ಓದುವುದು ಮತ್ತು ಬರೆಯುವುದರಿಂದ ಜೀವನದಲ್ಲಿ ಒಂದು ವಿಶೇಷ ಆನಂದವನ್ನು ಪಡೆಯಲು ಸಾಧ್ಯ ಎಂದು ಸಾಹಿತ್ಯ ಅಕಾಡೆಮಿ ನವ-ದೆಹಲಿಯ ಮಾಜಿ ಸದಸ್ಯ ಮುರಳೀಧರ ಉಪಾಧ್ಯ ಅಭಿಪ್ರಾಯಪಟ್ಟರು. ಅವರು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ಐ.ಕ್ಯೂ.ಎ.ಸಿ ಮತ್ತು ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಕಾಲೇಜಿನ ಸಾಹಿತ್ಯ ಸಂಘದ […]
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಿಂದಾಗಿ ಉಡುಪಿ ಜಿಲ್ಲೆಗೆ ವಿಶ್ವಮಾನ್ಯತೆ: ಯಶ್ ಪಾಲ್ ಸುವರ್ಣ
ಉಡುಪಿ: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಬಹುಮುಖ್ಯವಾಗಿದ್ದು, ಇವುಗಳ ಅಭಿವೃದ್ಧಿಗೆ ವಿಶೇಷ ಗಮನವನ್ನು ನೀಡಲಾಗುವುದು. ಶಿಕ್ಷಣವು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಂದ ಉಡುಪಿ ಜಿಲ್ಲೆ ರಾಜ್ಯ, ದೇಶ ಮತ್ತು ವಿದೇಶಗಳಲ್ಲಿ ಗುರುತಿಸಿಕೊಂಡು ವಿಶ್ವಮಾನ್ಯವಾಗಿದೆ. ಈ ಎರಡೂ ಕ್ಷೇತ್ರಗಳು ಉತ್ತಮ ಗುಣಮಟ್ಟದ ಸೇವೆಯನ್ನು ನೀಡಲು ಸಾಧ್ಯವಾದಲ್ಲಿ ಮಾತ್ರ ದೇಶ ಅಭಿವೃದ್ಧಿಯಾಗಬಲ್ಲದು ಎಂದು ಹೇಳಿದರು. ಅವರು ಉಡುಪಿ ಪುರಭವನದಲ್ಲಿ ನಡೆದ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ […]
ಡಾ.ಜಿ. ಶಂಕರ್ ಸರಕಾರಿ ಕಾಲೇಜಿನ ನಾಲ್ವರು ಸಹಪ್ರಾಧ್ಯಾಪಕರಿಗೆ ಪ್ರಾಧ್ಯಾಪಕ ಹುದ್ದೆಗೆ ಪದೋನ್ನತಿ
ಉಡುಪಿ: ಅಜ್ಜರಕಾಡಿನಲ್ಲಿರುವ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಾಲ್ಕು ಮಂದಿ ಸಹಪ್ರಾಧ್ಯಾಪಕರಿಗೆ ಪ್ರಾಧ್ಯಾಪಕ ಹುದ್ದೆಗೆ ಪದೋನ್ನತಿ ನೀಡಿ ಸರಕಾರ ಆದೇಶ ಹೊರಡಿಸಿದೆ. ಕಾಲೇಜಿನ ಪ್ರಾಂಶುಪಾಲ, ಇತಿಹಾಸಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಶೆಟ್ಟಿ, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಪ್ರಸಾದ್ ಕೆ., ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ನಿಕೇತನ, ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ. ರವಿರಾಜ್ ಶೆಟ್ಟಿ ಅವರನ್ನು ಪ್ರೊಫೆಸರ್ ಹುದ್ದೆಗೆ ನೇಮಿಸಲಾಗಿದೆ. ಇದೇ ಮೊದಲ […]