ಮಾತೃಭೂಮಿ ಮತ್ತು ಮಾತೃಭಾಷೆಯನ್ನು ಬೆಳೆಸಿ: ಡಾ. ಹಿರೇಮಗಳೂರು ಕಣ್ಣನ್‌

ಕಾರ್ಕಳ: ಕನ್ನಡ ಭಾಷೆ ನೆಲ ಜಲವನ್ನು ಉತ್ತುಂಗಕ್ಕೇರಿಸಲು ಯುವ ಪೀಳಿಗೆ ಸನ್ನದ್ದವಾಗಿರಬೇಕು. ಕನ್ನಡದ ಕಂಪನ್ನು ವಿಶ್ವದೆಲ್ಲೆಡೆ ಪಸರಿಸಲು ನಾವು ಶ್ರಮಿಸಬೇಕು. ಪೂರ್ವಜರ ಆಸ್ತಿಯಾದ ಭಾಷೆ, ಕಲೆ, ಸಂಪತ್ತನ್ನು ವೃದ್ಧಿಸಬೇಕು. ದ್ವೇಷ ತ್ಯಜಿಸಿ ಸುಮನಸಿನವರಾಗಿ, ಹೆತ್ತವರನ್ನು ಪ್ರೀತಿಯಿಂದ ಸಲಹಿ, ಮಾತೃಭೂಮಿ ಮತ್ತು ಮಾತೃ ಭಾಷೆಯನ್ನು ಬೆಳೆಸಬೇಕು ಎಂದು ಡಾ. ಹಿರೇಮಗಳೂರು ಕಣ್ಣನ್‌ ಕರೆ ನೀಡಿದರು. ಅವರು ಮಂಗಳವಾರದಂದು ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ‘ಕ್ರಿಯೇಟಿವ್‌ ನುಡಿಹಬ್ಬ-2022’ ಅನ್ನು ಉದ್ಘಾಟಿಸಿ ‘ನಿನಾದ’ ತ್ರೈಮಾಸಿಕ ಪತ್ರಿಕೆಯ ಎರಡನೇ ಸಂಚಿಕೆಯನ್ನು […]

ಕಾರ್ಕಳ: ನ.29 ರಂದು ಕ್ರಿಯೇಟಿವ್ ಕಾಲೇಜಿನಲ್ಲಿ ನುಡಿಹಬ್ಬ; ಡಾ. ಹಿರೇಮಗಳೂರು ಕಣ್ಣನ್ ಭಾಗಿ

ಕಾರ್ಕಳ: ಇಲ್ಲಿನ ಕ್ರಿಯೇಟಿವ್ ಕಾಲೇಜಿನ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.29 ರಂದು ಬೆಳಗ್ಗೆ 10 ಗಂಟೆಯಿಂದ ಹಿರ್ಗಾನ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ನುಡಿಹಬ್ಬ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಖ್ಯಾತ ವಾಗ್ಮಿ, ಚಿಂತಕ ಡಾ. ಹಿರೇಮಗಳೂರು ಕಣ್ಣನ್ ಭಾಗವಹಿಸಲಿದ್ದಾರೆ. ಇಂಧನ ಸಚಿವ ವಿ.ಸುನಿಲ್ ಕುಮಾರ್, ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ ಎಂದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.