ನಾರಾಯಣ ನೇತ್ರಾಲಯದ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ. ಕೆ.ಭುಜಂಗ ಶೆಟ್ಟಿ ನಿಧನ

ಬೆಂಗಳೂರು: ನಾರಾಯಣ ನೇತ್ರಾಲಯದ ಮುಖ್ಯಸ್ಥರೂ ಆಗಿರುವ ಖ್ಯಾತ ನೇತ್ರ ತಜ್ಞ ಡಾ. ಕೆ. ಭುಜಂಗಶೆಟ್ಟಿ ಅವರು ನಿಧನ ಹೊಂದಿದ್ದಾರೆ. ನಿನ್ನೆ(ಮೇ.19) ಆಸ್ಪತ್ರೆಗೆ ಹೋಗಿ ಚಿಕಿತ್ಸೆ ನೀಡಿದ್ದ ಡಾ.ಭುಜಂಗ ಶೆಟ್ಟಿ ಅವರಿಗೆ ಸಂಜೆ 6 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತವಾಗಿತ್ತು. ಆಸ್ಪತ್ರೆಯಿಂದ ಮನೆಗೆ ವಾಪಸಾದ ಬಳಿಕ ಹೃದಯಾಘಾತವಾಗಿದ್ದು, ಕೂಡಲೇ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. 1978 ರಲ್ಲಿ ಎಂಬಿಬಿಎಸ್ ಮಾಡಿದ ಅವರು, ಬೆಂಗಳೂರು ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದರು. ಅವರು ಎಂಬತ್ತರ ದಶಕದಲ್ಲಿ ಸಣ್ಣ […]