ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ ಅವರಿಗೆ ‘ಮದರ್ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್’

ಮಂಗಳೂರು: ನ್ಯಾಶನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮದ‌ರ್ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್‌’ಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ ಆಯ್ಕೆಯಾಗಿದ್ದಾರೆ.