ಜೋಳಿಗೆಯಲ್ಲಿ ದುಶ್ಚಟಗಳ ಭಿಕ್ಷೆ ಸಂಗ್ರಹಿಸಿದ ಡಾ. ಮಹಾಂತ ಶಿವಯೋಗಿಗಳ ಸ್ಮರಣಾರ್ಥ ಆಗಸ್ಟ್ 1 ಅನ್ನು ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ಸರ್ಕಾರದ ನಿರ್ಧಾರ

ಮಠಗಳ ಸ್ವಾಮೀಜಿಗಳು ತಮ್ಮ ಜೋಳಿಗೆಯಲ್ಲಿ ಭಕ್ತರ ಮನೆಗಳಿಗೆ ಭೇಟಿ ನೀಡಿ, ಭಿಕ್ಷೆ ಬೇಡಿ ಸಂಗ್ರಹಿಸಿ ದೊರೆತ ಧವಸ ಧಾನ್ಯಗಳಿಂದ ಮಠಗಳಲ್ಲಿ ಓದುವ ಬಡ ಮಕ್ಕಳಿಗೆ ಪ್ರಸಾದ ನೀಡುವ ಕಾರ್ಯವನ್ನು ಎಲ್ಲಡೆ ನಡೆದಿದೆ. ಆದರೆ ಸಮಾಜ ಹಾಗೂ ದೇಶವನ್ನು ಹಾಳು ಮಾಡುವ ದುರ್ವ್ಯಸನಗಳು, ದುಶ್ಚಟಗಳು ಹಾಗೂ ದುರಾಚಾರಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು. ಬಾಗಲಕೋಟೆಯ ಜಮಖಂಡಿ ತಾಲೂಕಿನ […]