ಎಂಐಟಿಯ ತಾಂತ್ರಿಕ ಶಿಕ್ಷಕ ಡಾ. ಮನೋಹರ ಪೈ ಗೆ ರಾಷ್ಟ್ರೀಯ ಪ್ರಶಸ್ತಿ
ಮಣಿಪಾಲ: ಭಾರತದ ಶಿಕ್ಷಣ ಸಚಿವಾಲಯದ ತಾಂತ್ರಿಕ ಶಿಕ್ಷಕರ ವಿಭಾಗದಲ್ಲಿ ನೀಡುವ ರಾಷ್ಟ್ರೀಯ ಪ್ರಶಸ್ತಿಯು ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಾರ್ತಾ ಮತ್ತು ಸಂವಹನ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಮನೋಹರ ಪೈ ಎಂ.ಎಂ, ಇವರಿಗೆ ಲಭಿಸಿದೆ. ಸೆಪ್ಟೆಂಬರ್ 6 ರಂದು ದೆಹಲಿಯ ಡಾ.ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ .ಮನೋಹರ ಪೈ ಅವರಿಗೆ ಪ್ರಶಸ್ತಿ ನೀಡಲಾಯಿತು. ಭಾರತ ಸರ್ಕಾರದ ಶಿಕ್ಷಣ ರಾಜ್ಯ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ, ರಾಜ್‌ಕುಮಾರ್ ರಂಜನ್ ಸಿಂಗ್, ಡಾ. ಸುಭಾಷ್ […]