ರಿಷಭ್ ಶೆಟ್ಟಿಯವರನ್ನು ಭೇಟಿಯಾದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್: ಚಿತ್ರ ನಿರ್ಮಾಣಕ್ಕೆ ಸರ್ಕಾರದ ಬೆಂಬಲದ ಬಗ್ಗೆ ಚರ್ಚೆ
ಪಣಜಿ: ಭಾರತದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲು ರಿಷಭ್ ಶೆಟ್ಟಿ ಗೋವಾಕ್ಕೆ ತೆರಳಿದ್ದ ಸಂದರ್ಭದಲ್ಲಿ ಅವರು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ. ರಿಷಭ್ ಅವರನ್ನು ಭೇಟಿಯಾದ ಬಳಿಕ ಸಾವಂತ್ ಟ್ವೀಟ್ ಮಾಡಿ, “ನಟ, ಬರಹಗಾರ, ಚಲನಚಿತ್ರ ನಿರ್ಮಾಪಕ ರಿಷಭ್ ಶೆಟ್ಟಿ ಅವರನ್ನು ಮಹಾಲಕ್ಷ್ಮಿ, ಪಣಜಿಯಲ್ಲಿ ಭೇಟಿ ಮಾಡಿ ಸಂವಾದ ನಡೆಸಿದೆ. ಅವರ ಕಾಂತಾರ ಚಿತ್ರ ಜನಮನ್ನಣೆ ಗಳಿಸಿದೆ. ವಿವಿಧ ವಿಷಯಗಳ ಕುರಿತು ಚರ್ಚಿಸಿದೆ ಮತ್ತು ಗೋವಾದಲ್ಲಿ ಚಲನಚಿತ್ರ ನಿರ್ಮಾಣಕ್ಕೆ ಗೋವಾ ಸರ್ಕಾರದ ಬೆಂಬಲವನ್ನು ಪುನರುಚ್ಚರಿಸಿದೆ” […]