ಜೀವನದಲ್ಲಿ ಎಲ್ಲ ಬಾಗಿಲುಗಳು ಮುಚ್ಚಿದರೂ ಒಂದು ಬಾಗಿಲು ತೆರೆದಿರುತ್ತದೆ: ಡಾ.ಪಿ.ವಿ.ಭಂಡಾರಿ

ಕುಂದಾಪುರ: ಕಾಲೇಜು ವಿದ್ಯಾರ್ಥಿಗಳು  ಹರೆಯವೂ ಅಲ್ಲದ ವಯಸ್ಕರೂ ಅಲ್ಲದ ವಯಸ್ಸಿನವರು. ಈ ವಿಚಿತ್ರ ವಯಸ್ಸಿನಲ್ಲಿ ಬರುವಂತಹ ಸಮಸ್ಯೆಗಳನ್ನು ಮತ್ತು ಸೋಲನ್ನು ಎದುರಿಸಲು ತಮಗೆ ತಾವೆ ತಯಾರಾಗಬೇಕು. ಜೀವನದಲ್ಲಿ ಎಲ್ಲ ಬಾಗಿಲುಗಳು ಮುಚ್ಚಿದರೂ ಒಂದು ಬಾಗಿಲು ತೆರೆದಿರುತ್ತದೆ ಎಂಬುದರಲ್ಲಿ ನಂಬಿಕೆ ಇಡಬೇಕು  ಎಂದು ಉಡುಪಿಯ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯರಾದ ಡಾ.ಪಿ.ವಿ.ಭಂಡಾರಿ ಕರೆ ನೀಡಿದರು. ಅವರು ಜೂನ್ 6ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಮಹಿಳಾ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವಯಸ್ಸಿನಲ್ಲಿ ಆತ್ಮವಿಶ್ವಾಸದ […]

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ: ಆರೋಗ್ಯ ಸಿಬ್ಬಂದಿಗಳಲ್ಲಿ ಒತ್ತಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಗಾರ

ಉಡುಪಿ: ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ, ಡಾ ಎ ವಿ ಬಾಳಿಗಾ ಸ್ಮಾರಕ ಆಸ್ಪತ್ರೆ, ಕಮಲ ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ‘ಆರೋಗ್ಯ ಸಿಬ್ಬಂದಿಗಳಲ್ಲಿ ಒತ್ತಡ ನಿರ್ವಹಣೆ’ ಕುರಿತು ಮಾಹಿತಿ ಕಾರ್ಯಗಾರವನ್ನು ಸೋಮವಾರದಂದು ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ ಎ […]

ಸರಕಾರದಿಂದ ಕೊರಗ ಸಮುದಾಯಕ್ಕೆ ಅನ್ಯಾಯವಾದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು: ಡಾ.ಪಿ.ವಿ ಭಂಡಾರಿ

ಉಡುಪಿ: ನೈಲ ಬುಡಕಟ್ಟು ಕೊರಗ ಸಮುದಾಯಕ್ಕೆ ವೈದ್ಯಕೀಯ ವೆಚ್ಚ ಮರುಪಾವತಿ ಯೋಜನೆಯನ್ನು ಸರಕಾರವು ಕೈಬಿಡಲು ಯೋಜಿಸಿದ್ದು, ಇದನ್ನು ವಿರೋಧಿಸಿ ಡಾ ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಮನೋವೈದ್ಯ ಡಾ.ಪಿ.ವಿ.ಭಂಡಾರಿ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಕೊರಗರ ಸಂಘದಿಂದ ಹಕ್ಕೊತ್ತಾಯ ಜಾಥಾ ಮತ್ತು ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಪಿ.ವಿ.ಭಂಡಾರಿ, ಕೇಂದ್ರ ಸರಕಾರವು ಎರಡು ಅತ್ಯುತ್ತಮ ಯೋಜನೆಗಳಾದ ಜನೌಷಧಿ ಮತ್ತು ಅಯುಷ್ಮಾನ್ ಭಾರತ್ ಗಳನ್ನು ಜಾರಿಗೆ ತಂದಿದ್ದರೂ, ಸರಕಾರದಲ್ಲಿರುವ ಮೇಲಧಿಕಾರಿಗಳು ಈ ಯೋಜನೆಗಳ ಸಮರ್ಪಕ ಅನುಷ್ಠಾನ ಆಗಲು […]