ಸಂವಿಧಾನದ ಆಶಯದ ಸಮಾನತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕ್ರೀಡೆ ಸಹಕಾರಿ: ಡಾ. ಅಶ್ವಥ್ ನಾರಾಯಣ್
ಉಡುಪಿ: ದೈಹಿಕ ಮತ್ತು ಮಾನಸಿಕ ಸಮಸ್ಯೆಗಳ ನಿವಾರಣೆ ಸೇರಿದಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಲು ಅಗತ್ಯವಿರುವ ಶಕ್ತಿಯನ್ನು ಕ್ರೀಡೆಯಲ್ಲಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಡೆಯಬಹುದು. ಇಂತಹ ಚಟುಚಟಿಕೆಯಲ್ಲಿ ಭಾಗವಹಿಸುವ ಮೂಲಕ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ, ಸಮಾನತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕ್ರೀಡೆಯ ಮೂಲಕ ಸಮರ್ಥವಾಗಿ ನೀಡಬಹುದಾಗಿದ್ದು, ಸಂವಿಧಾನದ ಆಶಯಗಳಿಗೆ ಎಲ್ಲರೂ ಬದ್ದರಾಗಿರಬೇಕು ಎಂದು ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ಮತ್ತು ಬಿಟಿ ಹಾಗೂ ವಿಜ್ಞಾನ […]