ಸಾಲಿಗ್ರಾಮ: ಅ. 15 ರಂದು ಕಾರಂತರ ಸಂಸ್ಮರಣೆ ಹಾಗೂ ಕಾರಂತ ಪುರಸ್ಕಾರ ಸಮಾರಂಭ
ಸಾಲಿಗ್ರಾಮ: ಗೆಳೆಯರ ಬಳಗದ ವತಿಯಿಂದ ಡಾ.ಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆ ಅಂಗವಾಗಿ ಅ.15 ರಂದು ಸಂಜೆ 6 ಗಂಟೆಗೆ ಕಾರ್ಕಡದ ಗಿರಿಜಾ ಕಲ್ಯಾಣ ಮಂತಪದಲ್ಲಿ ಕಾರಂತರ ಸಂಸ್ಮರಣೆ ಹಾಗೂ ಕಾರಂತ ಪುರಸ್ಕಾರ ಸಮಾರಂಭ ಜರುಗಲಿದ್ದು, ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಇವರು ವಹಿಸಿಕೊಳ್ಳಲಿದ್ದಾರೆ. ಹಿರಿಯ ಪತ್ರಕರ್ತ ಮೊಗೇರಿ ಜಯರಾಮ ಅಡಿಗ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಮತ್ತು ಡಿ. ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತ ಡಾ. […]
ನಡೆದಾಡುವ ವಿಶ್ವಕೋಶವಾಗಿದ್ದರು ಶಿವರಾಮ ಕಾರಂತರು: ಸಚಿವ ಮಾಧುಸ್ವಾಮಿ
ಉಡುಪಿ: ಶಿವರಾಮ ಕಾರಂತರು ಒಬ್ಬ ವ್ಯಕ್ತಿಯಾಗಿರದೇ ನಡೆದಾಡುವ ವಿಶ್ವಕೋಶ ಹಾಗೂ ವಿಶ್ವವಿದ್ಯಾನಿಲಯವಾಗಿದ್ದರು. ಸಾಹಿತಿಯಾಗಿ ಎಲ್ಲಾ ಕ್ಷೇತ್ರಗಳನ್ನು ಅರಿತು ತನ್ನನ್ನು ತಾನು ತೊಡಗಿಸಿಕೊಂಡಿದ್ದರು ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ಕೋಟತಟ್ಟು ಗ್ರಾಪಂ, ಉಡುಪಿ ಡಾ.ಶಿವರಾಮ ಕಾರಂತ ಟ್ರಸ್ಟ್, ಕೋಟದ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ಕೋಟ ಶಾಂಭವಿ ಶಾಲಾ ವಠಾರದಲ್ಲಿ ಸೋಮವಾರ ಆಯೋಜಿಸಲಾದ ಡಾ.ಶಿವರಾಮ ಕಾರಂತರ […]