ಮಾಹೆ ಗಾಂಧಿಯನ್ ಸೆಂಟರ್ ನಿಂದ ಡಾ.ಟಿ.ಎಂ.ಎ ಪೈ ಅವರ 125ನೇ ಜನ್ಮದಿನ ಆಚರಣೆ

ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ವತಿಯಿಂದ ಆಧುನಿಕ ಮಣಿಪಾಲದ ನಿರ್ಮಾತೃ, ಶಿಕ್ಷಣ ತಜ್ಞ ಡಾ.ಟಿ.ಎಂ.ಎ ಪೈ ಅವರ 125ನೇ ಜನ್ಮಶತಮಾನೋತ್ಸವವನ್ನು ಮಣಿಪಾಲದ ಅಕಾಡೆಮಿ ಹೈಯರ್ ಪ್ರೈಮರಿ ಸ್ಕೂಲ್ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಆಯೋಜಿಸುವುದರ ಮೂಲಕ ಆಚರಿಸಲಾಯಿತು. ವಿದ್ಯಾರ್ಥಿಗಳನ್ನು ಡಾ.ಟಿ.ಎಂ.ಎ. ಪೈ ವಾಸಿಸುತ್ತಿದ್ದ ಸ್ಮೃತಿ ಭವನಕ್ಕೆ ಕರೆದೊಯ್ದು, ಸ್ಮೃತಿ ಭವನದಲ್ಲಿರುವ ಛಾಯಾಚಿತ್ರಗಳು, ವೃತ್ತಪತ್ರಿಕೆ ತುಣುಕುಗಳು ಮತ್ತು ಇತರ ಆರ್ಕೈವಲ್ ವಸ್ತುಗಳ ಮೂಲಕ ಡಾ ಪೈ ಅವರ ಜೀವನ ಮತ್ತು ಬದುಕನ್ನು ಅವರಿಗೆ […]

ಮೋದಿ ಕನಸಿನ ಸದೃಢ ಸ್ವಾವಲಂಬಿ ‘ಹೊಸ ಭಾರತ’ಕ್ಕಾಗಿ ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಿ: ರಾಜನಾಥ್ ಸಿಂಗ್

ಮಣಿಪಾಲ: ಯುವಕರು ಹೊಸ ಆವಿಷ್ಕಾರ, ತಂತ್ರಜ್ಞಾನಗಳನ್ನು ಅಭಿವೃದ್ದಿ ಪಡಿಸಿ ಹೊಸ ಕಂಪನಿ, ಸಂಶೋಧನಾ ಸಂಸ್ಥೆ ಮತ್ತು ಸ್ಟಾರ್ಟ್ ಅಪ್ ಗಳನ್ನು ಸ್ಥಾಪಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಲಿಷ್ಠ ಮತ್ತು ಸ್ವಾವಲಂಬಿ ‘ಹೊಸ ಭಾರತ’ದ ಕನಸನ್ನು ಸಾಕಾರಗೊಳಿಸಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ ಕರೆ ನೀಡಿದರು. ಅವರು ಶುಕ್ರವಾರದಂದು ಮಾಹೆಯ 30 ನೇ ಘಟಿಕೋತ್ಸವದ ಮೊದಲನೆ ದಿನ ಮತ್ತು ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್‌ನ ಹೊಸ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ದೇಶದ ಯುವಕರ ಶಕ್ತಿಯನ್ನು ಜಗತ್ತೇ ಗುರುತಿಸುತ್ತಿದೆ. […]

ನ. 18-20 ರವರೆಗೆ ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ

ಮಣಿಪಾಲ: ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮವು ನವೆಂಬರ್ 18, 19 ಮತ್ತು 20 ರಂದು ಮೂರು ದಿನಗಳ ಕಾಲ ನಡೆಯಲಿದ್ದು, ಈ ಸಂದರ್ಭದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಶೈಕ್ಷಣಿಕ ಕ್ಷೇತ್ರದ ಅನೇಕ ಸಾಧ್ಯತೆಗಳ ಕುರಿತು ಚರ್ಚೆಗಳು ನಡೆಯಲಿದ್ದು ಸುಮಾರು ಐದು ಸಾವಿರ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಮಾಹೆ ಸಹ ಕುಲಪತಿ ಎಚ್.ಎಸ್ ಬಲ್ಲಾಳ್ ಇಂದು ನಡೆದ ರಾಷ್ಟೀಯ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ಘಟಿಕೋತ್ಸವದ ಮೊದಲ ದಿನ-ನವೆಂಬರ್ 18 ರಂದು ಭಾರತದ ರಕ್ಷಣಾ ಸಚಿವ ರಾಜನಾಥ್ […]