ನಿಫಾ ವೈರಸ್ ಭಯ ಬೇಡ, ಎಚ್ಚರವಿರಲಿ: ಡಾ.ವಾಸುದೇವ

ಉಡುಪಿ, ಜೂನ್ 11: ನಿಫಾ ವೈರಸ್ ಕುರಿತಂತೆ ಜಿಲ್ಲೆಯ ಜನತೆ ಯಾವುದೇ ರೀತಿ ಆತಂಕ ಪಡುವ ಅಗತ್ಯ ಇಲ್ಲ. ಜ್ವರ ಅಥವಾ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೂ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದು ಮುಂಜಾಗ್ರತೆ ವಹಿಸುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. ಅವರು ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿಯ ಅಂತರ್ ಇಲಾಖಾ ಸಮನ್ವಯ ಸಮಿತಿ […]