ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ

ನವದೆಹಲಿ: ಕರ್ನಾಟಕದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂದು ದೆಹಲಿಯ ಸಂಸತ್ ಭವನದಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಹೆಗ್ಗಡೆಯವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಧರ್ಮಸ್ಥಳದಲ್ಲೂ ನೀರಿನ ಸಮಸ್ಯೆ, ಪ್ರವಾಸ ಮುಂದೂಡುವಂತೆ ಡಾ. ಹೆಗ್ಗಡೆ ಮನವಿ

ಮಂಗಳೂರು: ರಾಜ್ಯದ ಪ್ರಮುಖ ಯಾತ್ರಾಸ್ಥಳ ದ.ಕ. ಜಿಲ್ಲೆಯ ಧರ್ಮಸ್ಥಳದಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಹೀಗಾಗಿ ಭಕ್ತಾದಿಗಳು ಕೆಲವು ದಿನಗಳ ಮಟ್ಟಿಗೆ ಪ್ರವಾಸ ಮುಂದೂಡುವಂತೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮನವಿ ಮಾಡಿದ್ದಾರೆ. ದೇಶದಾದ್ಯಂತ ಬಿಸಿಲಿನ ಝಳ ತೀವ್ರವಾಗಿದ್ದು ನೀರಿನ ಸಮಸ್ಯೆ ತಲೆದೋರಿದೆ. ದ.ಕ. ಜಿಲ್ಲಾಡಳಿತವೂ ರೇಶನಿಂಗ್ ಮೂಲಕ ನೀರು ನೀಡುತ್ತಿದೆ. ಧರ್ಮಸ್ಥಳದಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ನೇತ್ರಾವತಿ ನದಿಯಲ್ಲಿಯೂ ನೀರಿನ ಹರಿವು ಕಡಿಮೆಯಾಗಿದೆ. ಯಾತ್ರಾರ್ಥಿಗಳಿಗೆ ಅಧಿಕ ಪ್ರಮಾಣ ನೀರು ಬೇಕಾಗುತ್ತದೆ. ನೀರಿನ ಸಮಸ್ಯೆಯಿಂದಾಗಿ ಭಕ್ತಾದಿಗಳು ತಮ್ಮ […]