ನ. 21ರಿಂದ ರಂಗಭೂಮಿ ಉಡುಪಿ ಆಯೋಜಿಸುವ 40ನೇ ರಾಜ್ಯಮಟ್ಟದ ನಾಟಕ ಸ್ಪರ್ಧೆ

ಉಡುಪಿ: ರಂಗಭೂಮಿ ಉಡುಪಿಯ 40ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ನ. 21ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಸಂಜೆ 6ಗಂಟೆಗೆ ಎಂಜಿಎಂ ಕಾಲೇಜಿನ ಪ್ರಾಶುಂಪಾಲ ಎಂ.ಜಿ. ವಿಜಯ ಅವರು ನಾಟಕ ಸ್ಪರ್ಧೆಗೆ ಚಾಲನೆ ನೀಡುವರು. ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಕುಮಾರ ಬಿಕ್ಕೇರಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು […]