ಸ್ಪರ್ಧೆಯಲ್ಲಿ ಬಹುಮಾನಕ್ಕಿಂತಲೂ ಭಾಗವಹಿಸುವಿಕೆಯೆ ಮುಖ್ಯ: ವಿಜಯ್ ಬಲ್ಲಾಳ್

ಉಡುಪಿ: ವೇದಿಕೆಯನ್ನುವುದು ಮುಂದಿನ ಜೀವನದ ಭವಿಷ್ಯಕ್ಕೆ ಮುನ್ನುಡಿಗೆ ಸಹಕಾರಿಯಾಗುತ್ತದೆ. ಸ್ಪರ್ಧೆಯಲ್ಲಿ ಬಹುಮಾನ ಮುಖ್ಯವಲ್ಲ, ಆದರೆ ಭಾಗವಹಿಸುವಿಕೆ ಅತೀ ಮುಖ್ಯ ಎಂದು ಅಂಬಲಪಾಡಿ ದೇವಸ್ಥಾನದ ಆಡಳಿತ ಮಂಡಳಿಯ ಧರ್ಮದರ್ಶಿಗಳಾದ ನಿ.ಬಿ ವಿಜಯ ಬಲ್ಲಾಳ್ ಅಭಿಪ್ರಾಯಪಟ್ಟರು. ಮಂಗಳವಾರದಂದು ಮಲ್ಪೆಯ ಸರಕಾರಿ ಫ್ರೌಢಶಾಲಾ ಸಭಾಭವನದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಮತ್ತು ಸುಮನಸ ಕೊಡವೂರು ಇವರ ಸಹಯೋಗದಲ್ಲಿ ಆಯೋಜಿಸಲಾದ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ನಾಟಕ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲಾದೇವಿಯಾದ ಶಾರದೆಯನ್ನು ಆರಾಧಿಸಿದಲ್ಲಿ ನಮ್ಮ […]