ಕಾಂಗ್ರೆಸ್ ರಾಜೀನಾಮೆಗೆ ಮುಂದಾದ ಮತ್ತೋರ್ವ ಶಾಸಕಿ..?

ಖಾನಾಪುರ ಜು.08: ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭೆ ಕ್ಷೇತ್ರದ ಶಾಸಕಿ ಡಾ.ಅಂಜಲಿ ನಿಂಬಾಳಕರ ಅವರೂ ಸೋಮವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳು ತಾಲೂಕಿನ ಶಾಸಕರ ಆಪ್ತ ವಲಯದಲ್ಲಿ ಹರಡಿದೆ. ಭಾನುವಾರ  ಖಾನಾಪುರ ತಾಲೂಕಿನ ಕೆಲ ಕಾಂಗ್ರೆಸ್ ಮುಖಂಡರು ಪಟ್ಟಣದಲ್ಲಿ ಸಭೆಯನ್ನು ನಡೆಸಿ ಶಾಸಕರ ನಡೆಯ ಬಗ್ಗೆ ಚರ್ಚಿಸಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ ಪಟ್ಟಣದ ತಮ್ಮ ನಿವಾಸದಲ್ಲಿ ಸೋಮವಾರ ಮುಂಜಾನೆ ಕರೆದಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯನ್ನು ಶಾಸಕರು ಮುಂದೂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯುವ […]