ಒಂದು ರಾಷ್ಟ್ರ, ಒಂದು ಚುನಾವಣೆ: ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸಿದ ಉನ್ನತ ಮಟ್ಟದ ಸಮಿತಿ

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು 18,626 ಪುಟಗಳನ್ನು ಒಳಗೊಂಡ ವರದಿಯನ್ನು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ. ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಗುರುವಾರ ದೇಶಾದ್ಯಂತ ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳ ಕುರಿತು ತನ್ನ ವರದಿಯನ್ನು ಸಲ್ಲಿಸಿದೆ. ವರದಿಯು ಸೆಪ್ಟೆಂಬರ್ 2, 2023 ರಂದು ಸಮಿತಿ ರಚನೆಯಾದಾಗಿನಿಂದ 191 ದಿನಗಳವರೆಗೆ ಮಧ್ಯಸ್ಥಗಾರರು, ತಜ್ಞರು ಮತ್ತು […]

ಸಾಂಪ್ರದಾಯಿಕ ಕುದುರೆಗಾಡಿಯಲ್ಲಿ ಸದನಕ್ಕಾಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸದನದಲ್ಲಿ ಸೆಂಗೋಲಿನ ಸಹಿತ ಭವ್ಯ ಸ್ವಾಗತ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ನಿರ್ಮಾಣದ ಶತಮಾನಗಳ ಹಿಂದಿನ ಕನಸು ಈಗ ನನಸಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಹೇಳಿದ್ದಾರೆ. ಸಂಸತ್ತಿನ ಸದನಕ್ಕೆ ಪಾರಂಪರಿಕ ಕುದುರೆಗಾಡಿಯಲ್ಲಿ ಆಗಮಿಸಿದ ಅವರನ್ನು ಸೆಂಗೋಲು ಮತ್ತು ಪಾರಂಪರಿಕ ವಾದ್ಯಗಳ ಮೂಲಕ ಸದನದೊಳಕ್ಕೆ ಭವ್ಯವಾಗಿ ಸ್ವಾಗತಿಸಲಾಯಿತು. ಅವರ ಆಗಮನವನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸ್ವಾಗತಿಸಿದರು. ಬಜೆಟ್ ಅಧಿವೇಶನಕ್ಕೂ (Budget 2024) ಮುನ್ನಾದಿನ ಬುಧವಾರ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿ […]

ಉಡುಪಿ ಪರ್ಯಾಯ ಮಹೋತ್ಸವಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಆಹ್ವಾನ

ಉಡುಪಿ: ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಭಾವೀ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಪ್ರಧಾನ ಯೋಜನೆಯಾದ ಕೋಟಿಗೀತಾ ಲೇಖನ ಯಜ್ಞದ ಅಭಿಯಾನದ ಮಹತ್ವವನ್ನು ವಿವರಿಸಿ, ಭಗವದ್ಗೀತೆ ಪುಸ್ತಕದೊಂದಿಗೆ ಶ್ರೀಕೃಷ್ಣ ಪ್ರಸಾದವಿತ್ತು ಪರ್ಯಾಯ ಮಹೋತ್ಸವಕ್ಕೆ ಉಡುಪಿಗೆ ಆಗಮಿಸುವಂತೆ ಮನವಿ ಮಾಡಲಾಯಿತು. ವಿದ್ವಾಂಸರ ಲೋಕಭಾಷಾ ಪ್ರಚಾರ ಮಿತಿಯ ರಾಷ್ಟ್ರಾಧ್ಯಕ್ಷ ಪ್ರೊ. ಸದಾನಂದ ದೀಕ್ಷಿತ್, ಸಂಸ್ಕೃತ ವಿದ್ವಾಂಸ ಒಡಿಶಾದ ಡಾ. ಬಿಪಿನ ವಿಹಾರಿ ಶತಪತಿ, ರಾಜಸ್ಥಾನದ ಡಾ. ನಿರಂಜನ್ ಸಾಹು, ಅಸ್ಸಾಂನ ಡಾ. ಕುಶಲ ಕಲಿತಾ, ಉತ್ತರ […]

ಸುಖೋಯ್ ಯುದ್ದವಿಮಾನದಲ್ಲಿ ಹಾರಾಟ ನಡೆಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ತಮ್ಮ ಚೊಚ್ಚಲ ಫೈಟರ್ ಜೆಟ್ ಹಾರಾಟ ನಡೆಸಿದರು. ಅಸ್ಸಾಂನ ಆಯಕಟ್ಟಿನ ವಾಯುನೆಲೆಯಾದ ತೇಜ್‌ಪುರ್ ಏರ್‌ಫೋರ್ಸ್ ಸ್ಟೇಷನ್‌ನಲ್ಲಿ ಸುಖೋಯ್ 30 MKI ಯುದ್ಧ ವಿಮಾನದಲ್ಲಿ ದ್ರೌಪದಿ ಮುರ್ಮು ಹಾರಾಟ ನಡೆಸಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ರಾಷ್ಟ್ರಪತಿಗಳು, ಬ್ರಹ್ಮಪುತ್ರ ಮತ್ತು ತೇಜ್‌ಪುರ ಕಣಿವೆಯ ಮೇಲೆ ಸುಮಾರು 30 ನಿಮಿಷಗಳ ಕಾಲ ಹಾರಾಟ ನಡೆಸಿ ವಾಯುಪಡೆಯ ನಿಲ್ದಾಣಕ್ಕೆ ಮರಳಿದರು. ಹಾರಾಟದ ಬಗ್ಗೆ ಪ್ರತಿಕ್ರಿಯಿಸಿದ ಮುರ್ಮು, “ಅಚ್ಛಾ ಲಗಾ” ಎಂದಿದ್ದಾರೆ. […]

ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಡಿ. ವೈ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಇಲ್ಲಿನ ರಾಷ್ಟ್ರಪತಿ ಭವನದ ಮೆಜೆಸ್ಟಿಕ್ ಲಾನ್ಸ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಇವರ ತಂದೆ ವೈ ವಿ ಚಂದ್ರಚೂಡ್ ರವರು ಫೆಬ್ರವರಿ 22, 1978 ರಿಂದ ಜುಲೈ 11, 1985 ರವರೆಗೆ ಸುದೀರ್ಘ ಸೇವೆ ಸಲ್ಲಿಸಿದ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ನ್ಯಾಯಮೂರ್ತಿ ಚಂದ್ರಚೂಡ್ ರವರು ನವೆಂಬರ್ 10, 2024 ರವರೆಗೆ […]