ದ.ಕ ಜಿಲ್ಲೆಯ 100 ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ಧಾರ್ಮಿಕ ಸಂಸ್ಥೆಗಳ ಮಹಾಸಂಘದ ನಿರ್ಧಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 100 ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ರಾಜ್ಯ ಸಂಯೋಜಕ ಮೋಹನ್ ಗೌಡ ತಿಳಿಸಿದ್ದಾರೆ. ಅವರು ಮಂಗಳೂರಿನ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಂದಿರ ಅಧಿವೇಶನ ಪರಿಷತ್ತಿನ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, “ದೇವಾಲಯಗಳು ಹಿಂದೂಗಳಿಗೆ ಪವಿತ್ರ ಸ್ಥಳಗಳಾಗಿವೆ. ಅನೇಕ ಜನರು ಅನಾಗರಿಕ ಉಡುಪುಗಳನ್ನು ಧರಿಸಿ ದೇವಾಲಯಗಳಿಗೆ ಭೇಟಿ ನೀಡುತ್ತಾರೆ, ಇದು ದೇವಾಲಯದ […]