ಅನಧಿಕೃತ ನಳ್ಳಿ ನೀರಿನ ಸಂಪರ್ಕ ಕಡಿತ: ನಗರಸಭೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅನಧಿಕೃತವಾಗಿ ನಳ್ಳಿನೀರಿನ ಸಂಪರ್ಕವನ್ನು ಕಲ್ಪಿಸಿಕೊಂಡಿದ್ದಲ್ಲಿ, ನವೆಂಬರ್ 30 ರ ಒಳಗೆ ನಗರಸಭೆ ಕಚೇರಿಗೆ ನಿಯಮಾನುಸಾರ ಅರ್ಜಿ ಸಲ್ಲಿಸಿ, ಸದರಿ ಸಂಪರ್ಕವನ್ನು ಅಧಿಕೃತಗೊಳಿಸಿಕೊಳ್ಳಬೇಕು. ತಪ್ಪಿದಲ್ಲಿ ಯಾವುದೇ ಮುನ್ಸೂಚನೆ ನೀಡದೇ ಅನಧಿಕೃತ ಸಂಪರ್ಕವನ್ನು ಹಾಗೂ ನಗರಸಭಾ ಕಚೇರಿಯಿಂದ ನೀಡಲಾಗಿರುವ ಇತರೇ ಮೂಲಭೂತ ಸೌಲಭ್ಯಗಳನ್ನು ಕಡಿತಗೊಳಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಜು. 21-22 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ನೀರು ಶುದ್ಧೀಕರಣ ಘಟಕದಲ್ಲಿ ಕ್ಲುಬಿಕಲ್ ಮೀಟರ್, ಟ್ಯಾಂಕ್ ಕ್ಲೀನಿಂಗ್ ಹಾಗೂ ಗೇಟ್ ವಾಲ್ವ್ ಫಿಕ್ಸಿಂಗ್ ಇತ್ಯಾದಿ ಕೆಲಸಗಳನ್ನು ನಿರ್ವಹಿಸಬೇಕಾಗಿರುವುದರಿಂದ, ಜುಲೈ 21 ರ ಬೆಳಗ್ಗೆ 6 ರಿಂದ ಜು. 22 ರ ಬೆಳಗ್ಗೆ 6 ರ ವರೆಗೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಡಿಯುವ ನೀರಿನ ಸಮರ್ಪಕ ಪೂರೈಕೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ನಗರಸಭಾ ವ್ಯಾಪ್ತಿಯಲ್ಲಿ ಮಳೆಗಾಲ ಪ್ರಾರಂಭವಾಗುವವರೆಗೆ ಸಮರ್ಪಕ ರೀತಿಯಲ್ಲಿ ಕುಡಿಯುವ ನೀರು ಪೂರೈಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು. ಅವರು ಮಂಗಳವಾರದಂದು ನಗರಸಭೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಸ್ತುತ ಕುಡಿಯುವ ನೀರಿಗೆ 3 ದಿನಗಳಿಗೊಮ್ಮೆ ನೀರು ಸರಬರಾಜು ಮಾಡುವ ರೇಷನಿಂಗ್ ವ್ಯವಸ್ಥೆಯನ್ನು ಅಳವಡಿಸಿದ್ದು ಅದನ್ನು ಮುಂದುವರಿಸುವಂತೆ ಹೇಳಿದರು. ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಬೇಡಿಕೆಯನ್ನು ಗಮನಿಸಿ, ನಗರ ಸಭಾ ಸದಸ್ಯರಿಗೆ ಮಾಹಿತಿ ನೀಡಿ […]

ಕುಡಿಯುವ ನೀರಿನ ಪೂರೈಕೆಗೆ ಪರ್ಯಾಯ ಮೂಲಗಳನ್ನು ಶೋಧಿಸಲು ಜಿಲ್ಲಾಧಿಕಾರಿ ಸೂಚನೆ

ಕುಂದಾಪುರ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಮರ್ಪಕ ನೀರಿನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಸೋಮವಾರ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ಮತ್ತು ಬೈಂದೂರು ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನೀರಿನ ಲಭ್ಯತೆ, ಟ್ಯಾಂಕರ್ ಮೂಲಕ ನೀರು ನೀಡಲು ಅಗತ್ಯವಿರುವ ಕುಟುಂಬಗಳ ಸಂಖ್ಯೆಯನ್ನು ನಿಖರವಾಗಿ ತಿಳಿದುಕೊಂಡು, […]

ಕುಡಿಯುವ ನೀರಿಗೆ ತತ್ವಾರ; ಅನ್ಯ ಉದ್ದೇಶಕ್ಕೆ ಬಳಸಿದಲ್ಲಿ ಸಂಪರ್ಕ ಕಡಿತ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹ ಅತೀ ಕಡಿಮೆಯಾಗುತ್ತಿದ್ದು ಪ್ರಸ್ತುತ ಕುಡಿಯುವ ನೀರಿನ ಬೇಡಿಕೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ಉಡುಪಿ ನಗರಸಭೆಯಿಂದ ಕುಡಿಯುವ ನೀರಿನ ಸಂಪರ್ಕ ಪಡೆದಿರುವ ಸಾರ್ವಜನಿಕರು ಕುಡಿಯುವ ನೀರನ್ನು ಅನ್ಯ ಉದ್ದೇಶಗಳಾದ ವಾಹನ ತೊಳೆಯಲು, ಗಿಡಗಳಿಗೆ ನೀರು ಬಿಡಲು ಬಳಸಿದ್ದು ಕಂಡುಬಂದಲ್ಲಿ ಸದರಿಯವರ ನೀರಿನ ಸಂಪರ್ಕವನ್ನು ಯಾವುದೇ ಮುನ್ಸೂಚನೆ ನೀಡದೇ ಕಡಿತಗೊಳಿಸಿ ದಂಡ ವಿಧಿಸಲಾಗುವುದು. ನೀರನ್ನು ಮಿತವಾಗಿ ಬಳಸಲು ಆದ್ಯತೆ ನೀಡಿ, […]