ಭಾಷಾ, ಸಂಸ್ಕೃತಿ, ಕಲಾ ಸಂಭ್ರಮದ ಕಾರ್ಕಳ ಉತ್ಸವಕ್ಕೆ ರಾಜ್ಯಪಾಲರಿಂದ ಚಾಲನೆ
ಕಾರ್ಕಳ, ಮಾ.14,2022: ಕನ್ನಡ ನಾಡಿನ ಧರ್ಮ ಮತ್ತು ಸಂಸ್ಕೃತಿಯಲ್ಲಿ ಸಹೋದರತ್ವ ಮತ್ತು ಸಾಮರಸ್ಯದ ಮನೋಭಾವನೆ ತುಂಬಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಕಾರ್ಕಳ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದ ಸಂಸ್ಕೃತಿಯು ಪ್ರಪಂಚದ ಅತ್ಯಂತ ಪ್ರಾಚೀನ ಭಾರತೀಯ ಸಂಸ್ಕೃತಿಗಿಂತ ಭಿನ್ನವಾಗಿಲ್ಲ. ಕರ್ನಾಟಕದ ಪರಂಪರೆಯನ್ನು ಅದರ ವಾಸ್ತುಶಿಲ್ಪ, ಸಂಗೀತ, ಸಾಹಿತ್ಯ, ನೃತ್ಯ ಮತ್ತು ಕರಕುಶಲಗಳಿಂದ ತಿಳಿಯಬಹುದು ಮತ್ತು ಗುರುತಿಸಬಹುದು. ಕನ್ನಡನಾಡಿನ […]