ರಾಷ್ಟ್ರರಾಜಧಾನಿಯಲ್ಲಿ ‘ಭಾರತ ಡ್ರೋನ್ ಮಹೋತ್ಸವ’: ದೇಶದ ಅತಿದೊಡ್ಡ ಡ್ರೋನ್ ಉತ್ಸವವನ್ನು ಉದ್ಘಾಟಿಸಲಿರುವ ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರದಂದು ದೆಹಲಿಯ ಪ್ರಗತಿ ಮೈದಾನದಲ್ಲಿ ದೇಶದ “ಅತಿದೊಡ್ಡ ಡ್ರೋನ್ ಉತ್ಸವ” ಎಂದು ಕರೆಯಲ್ಪಡುವ ಭಾರತ್ ಡ್ರೋನ್ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಈ ವಲಯದಲ್ಲಿ ಭಾರತದ ಉಪಸ್ಥಿತಿಯನ್ನು ಹೆಚ್ಚಿಸುವ ಉದ್ದೇಶದಿಂದ ಸ್ಟಾರ್ಟ್‌ಅಪ್‌ಗಳು ಸೇರಿದಂತೆ ಪ್ರಮುಖ ಪಾಲುದಾರರನ್ನು ಈ ವೇದಿಕೆ ಒಟ್ಟುಗೂಡಿಸುತ್ತದೆ. ತಂತ್ರಜ್ಞಾನ ಮತ್ತು ನಾವೀನ್ಯತೆಯಲ್ಲಿ ಆಸಕ್ತಿ ಹೊಂದಿರುವ ಎಲ್ಲರೂ ಕಾರ್ಯಕ್ರಮವನ್ನು ವೀಕ್ಷಿಸುವಂತೆ ನಾನು ಒತ್ತಾಯಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಮೋದಿ ಅವರು ಕಿಸಾನ್ ಡ್ರೋನ್ […]