ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾದಕ ವ್ಯಸನಿಗಳಿಗೆ ಆಪ್ತ ಸಮಾಲೋಚನಾ ಕಾರ್ಯಕ್ರಮ
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಎ.ವಿ.ಬಾಳಿಗ ಆಸ್ಪತ್ರೆ ಇವರ ಸಹಯೋಗದಲ್ಲಿ ವಿವಿಧ ಠಾಣೆಗಳಲ್ಲಿ ಮಾದಕ ವಸ್ತು ಸೇವನೆ ಪ್ರಕರಣದಲ್ಲಿ ಭಾಗಿಯಾದ ಸುಮಾರು 200 ಮಾದಕ ವ್ಯಸನಿಗಳಿಗೆ ಹಾಗೂ ಅವರ ಪೋಷಕರಿಗೆ 1 ದಿನದ ಆಪ್ತ ಸಮಾಲೋಚನೆ ಕಾರ್ಯಕ್ರಮವನ್ನು ಭಾನುವಾರದಂದು ಡಾ.ಎ.ವಿ ಬಾಳಿಗ ಮೆಮೋರಿಯಲ್ ಹಾಸ್ಪಿಟಲ್ ನಲ್ಲಿ ಆಯೋಜಿಸಲಾಯಿತು. ದುಷ್ಚಟಗಳಿಗೆ ಒಳಗಾದ ವ್ಯಕ್ತಿಗಳಿಗೆ ವ್ಯಸನಗಳಿಂದ ಹೊರ ಬರಲು ಉಚಿತವಾಗಿ ಆಪ್ತ ಸಮಾಲೋಚನಾ ಕಾರ್ಯಕ್ರಮಗಳನ್ನು ಪ್ರತೀ ಭಾನುವಾರ ಹಮ್ಮಿಕೊಳ್ಳುತ್ತಿದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಜಿಲ್ಲಾ ಎಸ್ಪಿ […]
ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ವಿರೋಧಿ ದಿನ: 1.28 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಮಂಗಳೂರು ನಗರ ಪೊಲೀಸ್ ಇಲಾಖೆ
ಮಂಗಳೂರು: ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದಂದು ಮಂಗಳೂರು ನಗರ ಪೊಲೀಸರು 1.28 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ್ದಾರೆ. ಭಾನುವಾರದಂದು ಮಂಗಳೂರು ನಗರ ಪೊಲೀಸರು ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆಯ ಅಂಗವಾಗಿ ಈ ಕಾರ್ಯವನ್ನು ಕೈಗೊಂಡಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ 15 ಪೊಲೀಸ್ ಠಾಣೆಗಳಲ್ಲಿ ಕಳೆದ ಒಂದು ವರ್ಷದಲ್ಲಿ ವಶಪಡಿಸಿಕೊಳ್ಳಲಾದ ಡ್ರಗ್ಸ್ ಪ್ರಮಾಣ ಇದಾಗಿದೆ. 580.860 ಕೆಜಿ ಗಾಂಜಾ, 25 ಗ್ರಾಂ ಹೆರಾಯಿನ್ ಮತ್ತು […]