ಡ್ರಗ್ಸ್ ಪ್ರಕರಣ: ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಜಾ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧಿತರಾಗಿರುವ ಚಲನಚಿತ್ರ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಮತ್ತು ಅವರ ಸ್ನೇಹಿತ ಪ್ರಶಾಂತ್ ರಂಕಾ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಪೀಠ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 24ರಂದು ಪೂರ್ಣಗೊಳಿಸಿ, ತೀರ್ಪನ್ನು ಕಾಯ್ದಿರಿಸಿತ್ತು. ಅದರಂತೆ ಇಂದು (ಮಂಗಳವಾರ) ಮೂವರ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ ಆದೇಶ ನೀಡಿದೆ. ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ‌ಸೆಪ್ಟೆಂಬರ್ 14ರಂದು ಹಾಗೂ ಸಂಜನಾ […]