ಡ್ರಗ್ಸ್ ಪ್ರಕರಣ: ಮಾಜಿ ಸಚಿವರ ಪುತ್ರ ಸೇರಿ ಮೂವರ ಬಂಧನ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾವೇರಿಯ ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ‌. ಡಾರ್ಕ್ ನೆಟ್ ಮೂಲಕ ಡ್ರಗ್ಸ್  ಖರೀದಿಸಿ ಮಾರಾಟ ಮಾಡುತ್ತಿದ್ದ ಆರೋಪದಡಿ ಸುಜಯ್ ಎಂಬಾತನನ್ನು ಪೊಲೀಸರು ಈಚೆಗೆ ಬಂಧಿಸಿದ್ದರು. ಆತನಿಂದ 500 ಗ್ರಾಂ ಹೈಡ್ರೊ ಗಾಂಜಾ ವಶಕ್ಕೆ ಪಡೆದಿದ್ದರು. ಇದೇ ಪ್ರಕರಣದಲ್ಲಿ ಹೇಮಂತ್ ಹಾಗೂ ಸುನೇಶ್ ಎಂಬುವರು ತಲೆಮರೆಸಿಕೊಂಡಿದ್ದರು. ಇವರಿಬ್ಬರ ಬಂಧನಕ್ಕಾಗಿ ಸಿಸಿಬಿ ಪೊಲೀಸರು ಗೋವಾಕ್ಕೆ ಹೋಗಿದ್ದು, ಅಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. […]