ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಪ್ರತ್ಯೇಕ ಘಟಕ ರಚನೆ: ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ
ಉಡುಪಿ: ಜಿಲ್ಲೆಯಲ್ಲಿ ಗಣನೀಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಯುವ ಜನತೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವ ಕಳವಳಕಾರಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಪ್ರತ್ಯೇಕ ಘಟಕವನ್ನು ಆರಂಭಿಸುವಂತೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೇ ಅಕ್ಷಯ್ ಮಚ್ಚಿಂದ್ರ ಅವರನ್ನು ಭೇಟಿ ಮಾಡಿ ಆಗ್ರಹಿಸಿದರು. ಈ ಬಗ್ಗೆ ಈಗಾಗಲೇ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಿದ್ದು […]
ಮಂಗಳೂರು: ಗಾಂಜಾ ದಂಧೆಯಲ್ಲಿ ನಿರತ ವೈದ್ಯರು; ಬಯಲಾಗುತ್ತಿದೆ ಡ್ರಗ್ಸ್ ವ್ಯವಹಾರದ ಕರಾಳ ಮುಖಗಳು
ಮಂಗಳೂರು: ವೈದ್ಯಕೀಯ ಲೋಕದ ಡಗ್ಸ್ ನಂಟಿನ ಕರಾಳ ಮುಖಗಳು ಬಯಲಾಗುತ್ತಲೇ ಮಂಗಳೂರಿಗರಲ್ಲಿ ಆತಂಕ ಮನೆಮಾಡಿದೆ. ಮಂಗಳೂರು ನಗರ ಠಾಣೆಯ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಸಿಬ್ಬಂದಿ ಜನವರಿ 10 ರಂದು ಡ್ರಗ್ಸ್ ಸೇವನೆ ಮತ್ತು ಮಾರಾಟಕ್ಕೆ ಸಂಬಂಧಿಸಿ 10 ಜನರನ್ನು ಬಂಧಿಸಿದ್ದರು. ಜನವರಿ 12 ರಂದು ಇನ್ನೂ 3 ಜನರನ್ನು ಬಂಧಿಸಿದ್ದರು. ಇದೀಗ ಮತ್ತಿಬ್ಬರು ವೈದ್ಯರನ್ನು ಬಂಧಿಸಲಾಗಿದೆ. ಒಟ್ಟು 15 ಮಂದಿಯನ್ನು ಬಂಧಿಸಲಾಗಿದ್ದು, ಇದರಲ್ಲಿ 13 ಮಂದಿ ವೈದ್ಯರೇ ಇರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ. ಈ ಬಗ್ಗೆ […]
ಮಾದಕ ವಸ್ತು ಮಾರಾಟ ಯತ್ನ: ಆರೋಪಿಯ ಬಂಧನ; ಗಾಂಜಾ ಎಂಡಿಎಂಎ ವಶ
ಉಡುಪಿ: ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿ 41 ಗ್ರಾಂ ಗಾಂಜಾ, 1.3 ಗ್ರಾಂ ಎಂಡಿಎಂಎ ಮಾತ್ರೆಗಳು, ಆರೋಪಿ ವಶದಲ್ಲಿದ್ದ 2 ಮೊಬೈಲ್ ಮತ್ತು ಸ್ಕೂಟರ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಸರಳೆಬೆಟ್ಟು ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ. ಡಿಸೆಂಬರ್ 27ರಂದು ರಂದು ಖಚಿತ ಮಾಹಿತಿ ಮೇಲೆ ಮಣಿಪಾಲದ ಆರ್.ಎಸ್.ಬಿ ಭವನದ ಬಳಿ ದಾಳಿ ಮಾಡಿ 41 ಗ್ರಾಂ ಗಾಂಜಾ, 1.3 ಗ್ರಾಂ ಎಂಡಿಎಂಎ ಮಾತ್ರೆಗಳನ್ನು, ಆರೋಪಿ ವಶದಲ್ಲಿದ್ದ 2 ಮೊಬೈಲ್ ಮತ್ತು ಸ್ಕೂಟರ್ […]
ವಿದ್ಯಾರ್ಥಿಗಳಿಗಾಗಿ ನಶಾ ಮುಕ್ತ ಭಾರತ ಅಭಿಯಾನ ಮತ್ತು ಕಾನೂನು ಜಾಗೃತಿ ಕಾರ್ಯಾಗಾರ
ಉಡುಪಿ: ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ, ಜಿಲ್ಲಾ ಲೀಡ್ ಕಾಲೇಜು, ಉಡುಪಿ ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ, ಪೋಲೀಸ್ ಇಲಾಖೆ, ಜಿಲ್ಲಾ ಅಂಗವಿಕಲ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಉಡುಪಿ ಇವರ ಜಂಟಿ ಸಹಯೋಗದಿಂದ ನಶಾ ಮುಕ್ತ ಭಾರತ ಅಭಿಯಾನ ಮತ್ತು ಎನ್.ಎಸ್.ಎಸ್. ಸ್ವಯಂಸೇವಕರಿಗೆ ಕಾನೂನು ಜಾಗೃತಿ ಕಾರ್ಯಗಾರ ಕಾಲೇಜಿನ ಯು.ಜಿ. ಸಭಾಂಗಣದಲ್ಲಿ ಬುಧವಾರದಂದು ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನ […]
ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ವಿರೋಧಿ ದಿನ: 1.28 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಮಂಗಳೂರು ನಗರ ಪೊಲೀಸ್ ಇಲಾಖೆ
ಮಂಗಳೂರು: ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದಂದು ಮಂಗಳೂರು ನಗರ ಪೊಲೀಸರು 1.28 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ್ದಾರೆ. ಭಾನುವಾರದಂದು ಮಂಗಳೂರು ನಗರ ಪೊಲೀಸರು ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆಯ ಅಂಗವಾಗಿ ಈ ಕಾರ್ಯವನ್ನು ಕೈಗೊಂಡಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ 15 ಪೊಲೀಸ್ ಠಾಣೆಗಳಲ್ಲಿ ಕಳೆದ ಒಂದು ವರ್ಷದಲ್ಲಿ ವಶಪಡಿಸಿಕೊಳ್ಳಲಾದ ಡ್ರಗ್ಸ್ ಪ್ರಮಾಣ ಇದಾಗಿದೆ. 580.860 ಕೆಜಿ ಗಾಂಜಾ, 25 ಗ್ರಾಂ ಹೆರಾಯಿನ್ ಮತ್ತು […]