ಐಸಿಸಿ ರ್‍ಯಾಂಕಿಂಗ್‌ನಲ್ಲಿ ಗಿಲ್​, ಕಿಶನ್‌ಗೆ ಸಿಹಿ ಸುದ್ದಿ

ದುಬೈ: ಆರಂಭಿಕ ಆಟಗಾರರಾದ ಇಶಾನ್​ ಕಿಶನ್​ ಮತ್ತು ಶುಭಮನ್​ ಗಿಲ್​ ತಮ್ಮ ವೃತ್ತಿಜೀವನದ ಅತ್ಯುತ್ತಮ ರ್‍ಯಾಂಕಿಂಗ್ ಗಿಟ್ಟಿಸಿಕೊಂಡಿದ್ದಾರೆ.ವೆಸ್ಟ್​ ಇಂಡೀಸ್​ ಪ್ರವಾಸದ ಏಕದಿನ ಪಂದ್ಯಗಳಲ್ಲಿ ಭಾರತ ಕ್ರಿಕೆಟ್‌ ತಂಡದ ಯುವ ಬ್ಯಾಟರ್​ಗಳು ಉತ್ತಮ ಪ್ರದರ್ಶನ ನೀಡಿದ್ದು ಐಸಿಸಿ ಶ್ರೇಯಾಂಕದಲ್ಲಿ ಚೇತರಿಕೆ ಕಂಡಿದ್ದಾರೆ.ಐಸಿಸಿ ಏಕದಿನ ರ್‍ಯಾಂಕಿಂಗ್​ ಬಿಡುಗಡೆಯಾಗಿದೆ. ವೆಸ್ಟ್​ ಇಂಡೀಸ್​ ಪ್ರವಾಸದಲ್ಲಿ ಮಿಂಚಿದ ಯುವ ಆಟಗಾರರು ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಏಕದಿನ ಕ್ರಿಕೆಟ್​ ಶ್ರೇಯಾಂಕದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ […]