ದುರ್ಗಾ ದೌಡ್-ಪ್ರಚೋದನಕಾರಿ ಭಾಷಣದ ವಿರುದ್ದ ಕ್ರಮ ಕೈಗೊಳ್ಳಿ: ಸಿಪಿಐ(ಎಂ) ಆಗ್ರಹ
ಉಡುಪಿ: ಅಕ್ಟೋಬರ್ 2ರಂದು ಉಡುಪಿಯಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಂದರ್ಭದಲ್ಲಿ ಖಡ್ಗವನ್ನು ಝಳಪಿಸುತ್ತಾ ಮೆರವಣಿಗೆ ಮಾಡಿದ್ದು ಮಾತ್ರವಲ್ಲದೆ, ಸಭೆಯಲ್ಲಿ ಉದ್ರೇಕಕಾರಿ ಭಾಷಣ ಮಾಡಿದ್ದು ಪತ್ರಿಕೆಗಳಲ್ಲಿ ವರದಿಯಾಗಿದೆ. ಇದರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸುತ್ತದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಸಚಿವರಾದ ಸುನೀಲ್ ಕುಮಾರ್ ಮತ್ತು ಕೆಲವು ಶಾಸಕರೂ ಭಾಗವಹಿಸಿದ್ದು ಅವರ ಎದುರಿನಲ್ಲೇ ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಜನರು ಇಂತಹ ಪ್ರಜಾಪ್ರಭುತ್ವ ವಿರೋಧಿ ನಡವಳಿಕೆಗಳನ್ನು ತಿರಸ್ಕರಿಸಬೇಕೆಂದು ಸಿಪಿಐ(ಎಂ) ಮನವಿ […]
ಜಾಗೃತ ನಾರೀ ಶಕ್ತಿಯಿಂದ ದೇಶದಲ್ಲಿ ಇತಿಹಾಸ ನಿರ್ಮಾಣ ಸಾಧ್ಯ: ಕಾಜಲ್ ಹಿಂದೂಸ್ಥಾನಿ
ಉಡುಪಿ: ಜಿಲ್ಲಾ ಹಿಂದೂ ಜಾಗರಣ ವೇದಿಕೆ ವತಿಯಿಂದ ರಾಜಾಂಗಣ ಸಮೀಪ ಶನಿವಾರದಂದು ನಡೆದ ದುರ್ಗಾ ದೌಡ್ ಹಿಂದೂ ಶಕ್ತಿ ಸಂಚಲನ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಸಾಮಾಜಿಕ ಕಾರ್ಯಕರ್ತೆ ಕಾಜಲ್ ಹಿಂದೂಸ್ಥಾನಿ, ಹಿಂದೂ ಧರ್ಮದ ಸ್ಥಾಪನೆಯಲ್ಲಿ ದುರ್ಗೆ-ಸೀತೆಯರ ಕೊಡುಗೆ ಅಪಾರವಿದ್ದು, ಕಲಿಯುಗದಲ್ಲಿ ಧರ್ಮ ಸಂಸ್ಥಾಪನೆಯ ಜವಾಬ್ದಾರಿಯನ್ನು ಮಹಿಳೆಯರ ಕೈಗೆ ನೀಡಬೇಕು. ಜಾಗೃತ ನಾರೀ ಶಕ್ತಿಯಿಂದ ದೇಶದಲ್ಲಿ ಇತಿಹಾಸ ನಿರ್ಮಾಣ ಸಾಧ್ಯ ಎಂದರು. ಲವ್ ಜಿಹಾದ್ ಹಾಗೂ ಭೂಮಿ ಜಿಹಾದ್ ಮೂಲಕ ದೇಶದಲ್ಲಿ ಇಸ್ಲಾಮಿಕ್ ಆಕ್ರಮಣವಾಗುತ್ತಿದ್ದು, ಇದಕ್ಕೆ ಕುಮ್ಮಕ್ಕು […]
ದುರ್ಗಾ ದೌಡ್ ಗೆ ಸಜ್ಜಾದ ಕೃಷ್ಣ ನಗರಿ: 50 ಸಾವಿರ ಮಿಕ್ಕಿ ಹಿಂದೂ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ
ಉಡುಪಿ: ಹಿಂ.ಜಾ.ವೇ ವತಿಯಿಂದ ಅ.5 ರಂದು ಉಡುಪಿಯಲ್ಲಿ ನಡೆಯಲಿರುವ ದುರ್ಗಾ ದೌಡ್ ಕಾರ್ಯಕ್ರಮಕ್ಕೆ ಭರದ ಸಿದ್ದತೆಗಳು ಜರುಗುತ್ತಿವೆ. ಭೋಪಾಲದ ಸಂಸದೆ, ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮಧ್ಯಾಹ್ನ 2 ಗಂಟೆಗೆ ದಿಕ್ಸೂಚಿ ಭಾಷಣ ನೆರವೇರಿಸಲಿದ್ದಾರೆ. ಕಡಿಯಾಳಿ ಮಹಿಷ ಮರ್ದಿನಿ ದೇವಸ್ಥಾನದಿಂದ ಉಡುಪಿ ಕೃಷ್ಣ ಮಠದವರೆಗೆ ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ದೂರದ ಊರುಗಳಿಂದ ದುರ್ಗಾ ದೌಡ್ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಕಾರ್ಕಳ, ಕುಂದಾಪುರ, ದ.ಕ ಮುಂತಾದೆಡೆಗಳಿಂದ […]
ಹಿಂದೂ ಸಮಾಜದ ಒಗ್ಗಟ್ಟು ಮತ್ತು ಧರ್ಮ ಜಾಗೃತಿಗಾಗಿ ದುರ್ಗಾದೌಡ್: ಸುನಿಲ್ ಕುಮಾರ್
ಕಾರ್ಕಳ: ಅ.2 ರಂದು ಜಿಲ್ಲೆಯಲ್ಲಿ ದುರ್ಗಾ ದೌಡ್ ಆಯೋಜಿಸಲಾಗಿದ್ದು, ಅದರ ಪೂರ್ವಾಭಾವಿ ಸಭೆ ಸೆ.25 ರಂದು ಕಾರ್ಕಳದ ಗಾಂಧಿ ಮೈದಾನದ ಬಳಿ ಇರುವ ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನದಲ್ಲಿ ಜರುಗಿತು. ದೇಶದಲ್ಲಿ ಪ್ರಸಕ್ತ ವಾತಾವರಣವನ್ನು ಗಮನಿಸಿದಾಗ ಹಿಂದೂ ಸಮಾಜವು ಒಗ್ಗಟ್ಟಿನೊಂದಿಗೆ ಜಾಗೃತ ಸಮಾಜವನ್ನು ರೂಪಿಸುವ ಅಗತ್ಯವಿದೆ. ದೇಶ ವಿರೋಧೀ ಸಂಘಟನೆಗಳು ವಿಧ್ವಂಸ ಕೃತ್ಯದಲ್ಲಿ ತೊಡಗಿದ್ದು, ತನಿಖೆಯಿಂದ ಸತ್ಯ ಬಯಲಾಗುತ್ತಿದೆ. ಇಂತಹ ವಿಷಮ ಸನ್ನಿವೇಶದಲ್ಲಿ ಧರ್ಮ ಜಾಗೃತಿಯ ಸಂಕೇತವಾಗಿ ಅ.2 ರಂದು ದುರ್ಗಾ ದೌಡ್ ಅನ್ನು ಆಯೋಜಿಸಲಾಗುತ್ತಿದೆ ಎಂದು […]