ಸೆಕೆಂಡ್ ಪಿಯುಸಿ ಜಿಲ್ಲಾವಾರು ಫಲಿತಾಂಶ; ಉಡುಪಿ ಪ್ರಥಮ, ಯಾದಗಿರಿ ಕೊನೆಯ ಸ್ಥಾನ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ದಾಖಲೆಯ ಫಲಿತಾಂಶ ಬಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 13 ರಷ್ಟು ಹೆಚ್ಚಳವಾಗಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಎಂದಿನಂತೆ ಪ್ರಥಮ ಸ್ಥಾನ ಕಾಯ್ದುಕೊಂಡರೆ, ದಕ್ಷಿಣ ಕನ್ನಡ, ಕೊಡಗು, ವಿಜಯಪುರ, ಉತ್ತರ ಕನ್ನಡ ನಂತರದ ಸ್ಥಾನ ಪಡೆದಿವೆ. ಕಲಾ ವಿಭಾಗದಲ್ಲಿ ಶೇಕಡಾ 71, ವಾಣಿಜ್ಯ ವಿಭಾಗದಲ್ಲಿ ಶೇಕಡಾ 88, ವಿಜ್ಞಾನ ವಿಭಾಗದಲ್ಲಿ ಶೇಕಡಾ 92 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಗ್ರಾಮೀಣ ಭಾಗದಲ್ಲಿ ಫಲಿತಾಂಶವು ಶೇಕಡಾ 19 ರಷ್ಟು ಹೆಚ್ಚಳವಾಗಿದೆ. […]