ಮತದಾನ ಯಾ ಭಾಷಣಕ್ಕಾಗಿ ಲಂಚ; ಜನಪ್ರತಿನಿಧಿಗಳಿಗೆ ಕಾನೂನು ವಿನಾಯಿತಿ ಇಲ್ಲ: ಸುಪ್ರೀಂ ತೀರ್ಪು
ನವದೆಹಲಿ: ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಜನಪ್ರತಿನಿಧಿಗಳಿಗೆ ಕಾನೂನು ಕ್ರಮದಿಂದ ಯಾವುದೇ ವಿನಾಯಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಸೋಮವಾರ ಹೇಳಿದೆ. ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಏಳು ಮಂದಿ ಇದ್ದ ಸಾಂವಿಧಾನಿಕ ಪೀಠವು, 1998ರಲ್ಲಿ ಜೆಎಂಎಂ ಲಂಚ ಪ್ರಕರಣದಲ್ಲಿ ಪಂಚ ಸದಸ್ಯ ಪೀಠ ನೀಡಿದ್ದ ತೀರ್ಪನ್ನು ಸರ್ವಾನುಮತದಿಂದ ರದ್ದು ಮಾಡಿದೆ. ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಶಾಸಕರಿಗೆ ಆ ತೀರ್ಪಿನಲ್ಲಿ ಕಾನೂನು […]