ಮಂಗಳೂರು: ಪೂರ್ವಾನುಮತಿ ಇಲ್ಲದೆ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಕೆ; ತೆರವಿಗೆ ಸೂಚನೆ

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟಿನಲ್ಲಿ ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನ ಆಯೋಜಿಸಲಾಗಿದ್ದು, ಹರೇಕಳ ಕಚೇರಿ ಬಳಿ ಟಿಪ್ಪು ಸುಲ್ತಾನ್ ಕಟೌಟ್ ಹಾಕಲಾಗಿದೆ. ಇದೀಗ ಅದನ್ನು ತೆರವುಗೊಳಿಸಲು ಪೊಲೀಸರು ನೋಟಿಸ್​ ನೀಡಿದ್ದಾರೆ ಎಂದು ನ್ಯೂಸ್ 18 ವರದಿ ಹೇಳಿದೆ. ಬ್ಯಾನರ್ ಹಾಕಲು ಅನುಮತಿ ಪಡೆಯದೇ ಇರುವುದರಿಂದ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಟಿಪ್ಪು ಪ್ರತಿಮೆ ಮತ್ತು ಬ್ಯಾನರ್ ತೆರವುಗೊಳಿಸಲು ನೋಟಿಸ್​ ನೀಡಿದ್ದಾರೆ ಎಂದು ವರದಿಯಾಗಿದೆ. ಡಿವೈಎಫ್ಐ ರಾಜ್ಯ‌ ಸಮ್ಮೇಳನದ ಪ್ರಯುಕ್ತ ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ […]