ಸಕ್ಷಮ ಪ್ರಾಧಿಕಾರದಲ್ಲಿ ಜನನ-ಮರಣ ನೋಂದಣಿ ಕಡ್ಡಾಯ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

ಉಡುಪಿ: ಪ್ರತಿಯೊಬ್ಬರೂ ಸಕ್ಷಮ ಪ್ರಾಧಿಕಾರದಲ್ಲಿ ಜನನ –ಮರಣ ನೋಂದಣಿಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಗುರುವಾರದಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ-ಮರಣ ಪ್ರಮಾಣ ಪತ್ರವು ಮಾನವನ ಪ್ರತಿಯೊಂದು ವಿಶೇಷ ಹಂತಗಳಲ್ಲಿ ಅತ್ಯವಶ್ಯವಾಗಿದೆ. ಜನನ-ಮರಣ ಮತ್ತು ನಿರ್ಜೀವ ಜನನಗಳನ್ನು ನೋಂದಾಯಿಸುವುದು ಕಡ್ಡಾಯವಾಗಿದ್ದು, 20 ದಿನಗಳ ಒಳಗಾಗಿ ನಿಶುಲ್ಕವಾಗಿ ನೋಂದಾಯಿಸಬಹುದಾಗಿದೆ. 21 ದಿನದ ನಂತರ 30 ದಿನದ […]