ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಜೂನ್ 30 ರ ಒಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ಉತ್ತಮ ಪರಿಕರಗಳನ್ನು ಬಳಸಿ, ಬೆಳೆಗಳ ಆರೋಗ್ಯ ನಿರ್ವಹಣೆ ಹಾಗೂ ಹೆಚ್ಚಿನ ಇಳುವರಿ ಪಡೆದು ನಿರೀಕ್ಷಿತ ಆದಾಯ ಗಳಿಸಲು ಎಲ್ಲಾ ವರ್ಗದ ರೈತರಿಗೆ ಕೇಂದ್ರ ಸರ್ಕಾರದಿಂದ ವಾರ್ಷಿಕ 6000 ರೂ. ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಒಟ್ಟು ಮೂರು ಸಮಾನ ಕಂತುಗಳಲ್ಲಿ ಹಾಗೂ ರಾಜ್ಯ ಸರ್ಕಾರಿಂದ 4000 ರೂ. ಗಳನ್ನು ಎರಡು ಕಂತುಗಳಲ್ಲಿ ಒಟ್ಟು 10000 ರೂ. ಗಳನ್ನು ಪಡೆಯಲು, ಸಾಗುವಳಿ […]

ಕೃಷಿ ಸಮ್ಮಾನ್-ಪಿ.ಎಂ ಕಿಸಾನ್ ಸೌಲಭ್ಯಗಳಿಗೆ ಇ-ಕೆವೈಸಿ ಜೋಡಣೆಗೆ ಕೊನೆಯ ಅವಕಾಶ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪಿ.ಎಂ ಕಿಸಾನ್ ಬೀಮಾ ಯೋಜನೆಯ ಆರ್ಥಿಕ ಸೌಲಭ್ಯ ಪಡೆಯಲು ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸಿಕೊಳ್ಳದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆಯಾಗುವುದಿಲ್ಲ. ಜಿಲ್ಲೆಯ ರೈತರಿಗೆ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಈಗಾಗಲೇ ಕೃಷಿ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕೆಲ ರೈತ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಂಡಿರುವುದಿಲ್ಲ. ಇ-ಕೆವೈಸಿ ಮಾಡಿಸಿಕೊಳ್ಳಲು ಇದು ಕೊನೆಯ ಅವಕಾಶವಾಗಿದ್ದು, ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ […]

ಪಿ.ಎಂ ಕಿಸಾನ್ ಯೋಜನೆಗೆ ಆಗಸ್ಟ್ 15ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯ

ಉಡುಪಿ: ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ತಮ್ಮ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಪಡೆಯುತ್ತಿರುವ ಜಿಲ್ಲೆಯ ರೈತರು ಆಗಸ್ಟ್ 15 ರ ಒಳಗೆ ಸಮೀಪದ ಕಾಮನ್ ಸರ್ವೀಸ್ ಸೆಂಟರ್‌ಗಳಲ್ಲಿ ಅಥವಾ ಸ್ಮಾರ್ಟ್ಪೋನ್ ಬಳಸುತ್ತಿರುವ ರೈತರು ಪಿ.ಎಂ ಕಿಸಾನ್ ವೆಬ್ ಪೋರ್ಟಲ್ www.pmkisan.gov.in ತಂತ್ರಾಂಶದ ಮೂಲಕ ತಮ್ಮ ಬ್ಯಾಂಕ್ ಖಾತೆಗೆ ಇ-ಕೆವೈಸಿಯನ್ನು ಮಾಡಿಕೊಳ್ಳಬಹುದಾಗಿದೆ. ಆಗಸ್ಟ್ 15 ರ ಒಳಗೆ ಇ-ಕೆವೈಸಿ ಮಾಡಿಸದೇ ಇರುವ ರೈತರಿಗೆ ಪಿ.ಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ […]

ಪಿ.ಎಂ ಕಿಸಾನ್ ಯೋಜನೆ : ಇ-ಕೆವೈಸಿ ಕಡ್ಡಾಯ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಪಿ.ಎಂ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ಜಿಲ್ಲೆಯ ಎಲ್ಲಾ ಫಲಾನುಭವಿ ರೈತರು ಮೇ 31 ರ ಒಳಗೆ ಹತ್ತಿರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.