ಮುಂದಿನ 6 ತಿಂಗಳಲ್ಲಿ ಇ-ಪಾಸ್‌ಪೋರ್ಟ್ ಸೇವೆ ಆರಂಭ: ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮಾಹಿತಿ
ನವದೆಹಲಿ: ಈ ವರ್ಷದ ಅಂತ್ಯದ ವೇಳೆಗೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಎಲೆಕ್ಟ್ರಾನಿಕ್-ಪಾಸ್‌ಪೋರ್ಟ್‌ಗಳನ್ನು ಹೊರತರಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಡಾ. ಔಸಫ್ ಸಯೀದ್ ಅವರು ಹೈದರಾಬಾದ್‌ನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪಾಸ್‌ಪೋರ್ಟ್ ಪುಸ್ತಕಕ್ಕೆ ಇ-ಚಿಪ್ ಮತ್ತು ಇನ್ನೂ ಕೆಲವು ವೈಶಿಷ್ಟ್ಯಗಳನ್ನು ಸೇರಿಸಲಾಗುವುದು, ಈ ವ್ಯವಸ್ಥೆ ಭಾರತೀಯ ಪಾಸ್‌ಪೋರ್ಟ್‌ಗೆ ಭದ್ರತಾ ನವೀಕರಣವನ್ನು ಒದಗಿಸುತ್ತದೆ ಮತ್ತು ಯಂತ್ರದ ಮೂಲಕ ಓದುವಿಕೆಯನ್ನು ಸಕ್ರಿಯಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ. ‘ವಿದೇಶ ಸಂಪರ್ಕ’ ಕಾರ್ಯಕ್ರಮದ ಭಾಗವಾಗಿ ಕಾರ್ಯದರ್ಶಿ ನೇತೃತ್ವದ ಅಧಿಕಾರಿಗಳ ತಂಡವು ಹೈದರಾಬಾದ್‌ಗೆ […]