ಅಸಂಘಟಿತ ಕಾರ್ಮಿಕರೆಲ್ಲರೂ ಇ-ಶ್ರಮ್ ನಲ್ಲಿ ನೋಂದಾಯಿಸಿಕೊಳ್ಳುವುದು ಅವಶ್ಯ: ಡಾ. ಕೆ ವಿದ್ಯಾಕುಮಾರಿ
ಉಡುಪಿ: ಅಸಂಘಟಿತ ಕಾರ್ಮಿಕರು ಸರಕಾರದ ಸಾಮಾಜಿಕ ಭದ್ರತಾ ಯೋಜನೆಗಳೂ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಪಡೆಯಲು ಇ-ಶ್ರಮ್‌ನಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಮಿಕ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ಅಸಂಘಟಿತ ವರ್ಗಗಳ ಕಾರ್ಮಿಕರುಗಳಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆ, ಕಾರ್ಮಿಕರಿಗೆ ವಿಶೇಷ ನೀತಿಗಳು, ಯೋಜನೆಗಳು ಹಾಗೂ ಕಲ್ಯಾಣ […]
ಅಸಂಘಟಿತ ಹಾಗೂ ವಲಸೆ ಕಾರ್ಮಿಕರು ಇ-ಶ್ರಮ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳಿ: ಜಿಲ್ಲಾಧಿಕಾರಿ
ಉಡುಪಿ: ಅಸಂಘಟಿತ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ರೂಪಿಸಲು, ಕಾರ್ಮಿಕರ ದತ್ತಾಂಶವನ್ನು ಇ-ಶ್ರಮ್ ನಲ್ಲಿ 379 ವಿವಿಧ ವರ್ಗಗಳ ಕಾರ್ಮಿಕರ ನೊಂದಣಿ ನಡೆಯುತ್ತಿದ್ದು, ಇದರಲ್ಲಿ ಪ್ರತಿಯೊಬ್ಬ ಕಾರ್ಮಿಕನೂ ಹೆಸರು ನೊಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಮಿಕ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದಾದ್ಯಂತ 38 ಕೋಟಿಗೂ ಅಧಿಕ ಕಾರ್ಮಿಕರು ಅಸಂಘಟಿತ ವರ್ಗಗಳಲ್ಲಿ ತೊಡಗಿಕೊಂಡಿದ್ದು ಜಿಲ್ಲೆಯಲ್ಲಿ ಇವರ ಸಂಖ್ಯೆ 3 ಲಕ್ಷಕ್ಕೂ […]