ಜಮ್ಮು-ಕಾಶ್ಮೀರದಲ್ಲಿ ಭೂಕಂಪನ: ಮನೆ, ಕಟ್ಟಡಗಳಲ್ಲಿ ಬಿರುಕು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಇಂದು ಮಧ್ಯಾಹ್ನ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಭೂಕಂಪನ ಉಂಟಾಗಿದೆ. ಭೂಮಿ ಕಂಪಿಸಿದ್ದರಿಂದ ಅನೇಕ ಮನೆಗಳು, ಕಟ್ಟಡಗಳಲ್ಲಿ ಬಿರುಕುಗಳು ಉಂಟಾಗಿವೆ ಎಂದು ಲೇಹ್ ನ ಸ್ಥಳೀಯರು ತಿಳಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮಧ್ಯಮ ತೀವ್ರತೆಯ ಭೂಕಂಪ ಸಂಭವಿಸಿದೆ, ಆದರೆ ಯಾವುದೇ ಪ್ರಾಣಹಾನಿ […]