ಭೂಕುಸಿತ: ಮಹಿಳಾ ಕ್ರಿಕೆಟ್ ಆಟಗಾರ್ತಿ ಮೃತ್ಯು, ಐವರು ಕಣ್ಮರೆ
ಮೇಘಾಲಯ: ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಭಾರೀ ಮಳೆಗೆ ಭೂಕುಸಿತ ಉಂಟಾಗಿದ್ದು, ಇದರಿಂದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಜಿಯಾ ಅಹ್ಮದ್ ಮೃತಪಟ್ಟಿದ್ದಾರೆ. ಇತರ ಐವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ಮಾವ್ನಿ ಪ್ರದೇಶದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ. ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಟೂರ್ನಿಗಳಲ್ಲಿ ಮೇಘಾಲಯ ಪರ ಆಡಿದ್ದ ರಜಿಯಾ ಅವರ ಮೃತದೇಹವನ್ನು ಅವಶೇಷಗಳಡಿಯಿಂದ ಪತ್ತೆ ಹಚ್ಚಲಾಗಿದೆ. ಇನ್ನೂ ಐವರು ನಾಪತ್ತೆಯಾಗಿದ್ದಾರೆ ಎಂದು ಪೂರ್ವ ಖಾಸಿ ಹಿಲ್ಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಲ್ವೆಸ್ಟರ್ […]