ಚುನಾವಣಾ ‘ಗ್ಯಾರಂಟಿ’, ‘ಭಾಗ್ಯ’ಗಳ ಆಮಿಷಕ್ಕೆ ವಿರಾಮ ಕೋರಿ ಅರ್ಜಿ ಸಲ್ಲಿಕೆ: ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಚುನಾವಣೆ ವೇಳೆ ಮತದಾರರಿಗೆ ‘ಗ್ಯಾರಂಟಿ’, ‘ಭಾಗ್ಯ’ಗಳ ಆಮಿಷವೊಡ್ಡಿ ಮತ ಪಡೆಯುವ ರಾಜಕೀಯ ಪಕ್ಷಗಳ ಮಾದರಿಗೆ ಕರ್ನಾಟಕ ರಾಜ್ಯ ಅವಕಾಶ ಮಾಡಿಕೊಟ್ಟಿದ್ದು, ಇಂತಹ ನಡೆ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂಬ ಮನವಿಗೆ ಹೈಕೋರ್ಟ್‌ ಸ್ಪಂದಿಸಿದೆ. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ‘ಗ್ಯಾರಂಟಿ’ ರೂಪದಲ್ಲಿ ಆಮಿಷ ನೀಡಲಾಗಿದ್ದು, ಅಂತಹ ಅಕ್ರಮಗಳನ್ನು ತಡೆಯುವಂತೆ ಆಯಾ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ […]

ಕರ್ನಾಟಕ ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಮತಾದರರ ನೋಂದಣಿ ನಿಯಮಗಳು

ಉಡುಪಿ: ಕರ್ನಾಟಕ ನೈರುತ್ಯ ಪದವೀಧರರ/ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸಂಬಂಧಿಸಿದಂತೆ ಮತದಾರರ ನೋಂದಣಿ ನಿಯಮಗಳು ಈ ಕೆಳಗಿನಂತಿವೆ. ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತಕ್ಷೇತ್ರಗಳ ಮತದಾರರ ಪಟ್ಟಿ ತಯಾರಿಕೆಗೆ ಮತದಾರರ ನೋಂದಣಿ ನಿಯಮಗಳು 1960 ರ 31(4) ನೇ ನಿಯಮದ ಅನುಸಾರ ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಮತ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು ಸಂಬಂಧಿಸಿದ ಶಿಕ್ಷಕರ ಮತ […]

ಪಂಚ ರಾಜ್ಯ ಚುನಾವಣಾ ದಿನಾಂಕ ಪ್ರಕಟ: ನವೆಂಬರ್ 7 ರಿಂದ 30 ಚುನಾವಣೆ; ಡಿ.3 ರಂದು ಫಲಿತಾಂಶ

ನವದೆಹಲಿ: ಭಾರತದ ಚುನಾವಣಾ ಆಯೋಗವು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದ್ದು ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ಚುನಾವಣೆಯ ದಿನಾಂಕ ನಿಗದಿಯಾಗಿದೆ. ಛತ್ತೀಸ್ಗಢ : 7-17 ನವೆಂಬರ್ ಮಧ್ಯಪ್ರದೇಶ : 17 ನವೆಂಬರ್ ರಾಜಸ್ಥಾನ: 23 ನವೆಂಬರ್ ತೆಲಂಗಾಣ: 30 ನವೆಂಬರ್ ಮಿಜೋರಾಂ: 7 ನವೆಂಬರ್ ಫಲಿತಾಂಶಗಳ ಪ್ರಕಟಣೆ: 3 ಡಿಸೆಂಬರ್

ಆಗಸ್ಟ್ 21 ರ ವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆ ಸಮೀಕ್ಷೆ

ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ಕ್ಕೆ ಸಂಬಂಧಿಸಿದಂತೆ, ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯಲ್ಲಿ ಆಗಸ್ಟ್ 21 ರ ವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆ ಸಮೀಕ್ಷೆ ಕಾರ್ಯವನ್ನು ನಡೆಸಲಿದ್ದು, ಈ ಸಂದರ್ಭದಲ್ಲಿ 18 ವರ್ಷ ತುಂಬಿದ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದೇ ಇರುವವರ ಮಾಹಿತಿ, 17 ವರ್ಷ ತುಂಬಿದ ಯುವಕ ಯುವತಿಯರ ಮಾಹಿತಿ, ಮೃತ, ಶಾಶ್ವತವಾಗಿ ವಲಸೆಹೋದ, ಮತದಾರರ ಪಟ್ಟಿಯಲ್ಲಿ ಎರಡು ಅಥವಾ ಎರಡಕ್ಕಿಂತ ಹೆಚ್ಚು ಬಾರಿ ಹೆಸರು ಇರುವ ಮತದಾರರ ವಿವರವನ್ನು […]

ಚುನಾವಣಾ ಸಂಸ್ಥೆಗಳ ಆಯುಕ್ತರ ನೇಮಕಾತಿಗಾಗಿ ಹೊಸ ಮಸೂದೆ: ಆಯ್ಕೆ ಸಮಿತಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಲ್ಲ ಸ್ಥಾನ

ನವದೆಹಲಿ: ಇಂದು ರಾಜ್ಯಸಭೆಯಲ್ಲಿ ಮಂಡಿಸಲಿರುವ ಹೊಸ ಮಸೂದೆಯ ಪ್ರಕಾರ ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕ್ಯಾಬಿನೆಟ್ ಸಚಿವರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯು ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲಿದೆ. ಮಾರ್ಚ್‌ನಲ್ಲಿ, ಸುಪ್ರೀಂ ಕೋರ್ಟ್, ಚುನಾವಣಾ ಆಯೋಗದ ಸ್ವಾತಂತ್ರ್ಯವನ್ನು ಖಾತ್ರಿಪಡಿಸುವ ಪ್ರಯತ್ನದಲ್ಲಿ, ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಈ ಮೂವರನ್ನು ಒಳಗೊಂಡ ಸಮಿತಿಯು ಚುನಾವಣಾ ಸಂಸ್ಥೆಗೆ ನೇಮಕಾತಿಗಳನ್ನು ಮಾಡಬೇಕು ಎಂದು ತೀರ್ಪು ನೀಡಿತ್ತು. ನ್ಯಾಯಮೂರ್ತಿ […]