ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ: ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬುಧವಾರದಂದು ವೇಳಾಪಟ್ಟಿ ಪ್ರಕಟವಾಗಲಿದ್ದು ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ. ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಬೇಕಿತ್ತು. ಆದರೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿರುವುದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ […]

ರಾಜ್ಯದಲ್ಲಿ ಅತಿ ಹೆಚ್ಚು ಮಹಿಳಾ ಮತದಾರರಿರುವ ಜಿಲ್ಲೆ: ಉಡುಪಿಗೆ ಪ್ರಥಮ ಸ್ಥಾನ

ಉಡುಪಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ – 2023 ರ ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ರಾಜ್ಯದಲ್ಲಿ ಅತ್ಯಂತ ಹೆಚ್ಚು ಮಹಿಳಾ ಮತದಾರರಿರುವ ಜಿಲ್ಲೆಯಾಗಿ ಉಡುಪಿ ಮೊದಲ ಸ್ಥಾನದಲ್ಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಅತ್ಯಂತ ಕಡಿಮೆ ಮಹಿಳಾ ಮತದಾರರನ್ನು ಹೊಂದಿರುವ ಜಿಲ್ಲೆಯಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿ ತಿಳಿಸಿದೆ. ಉಡುಪಿಯಲ್ಲಿ 4,90,060 ಪುರುಷ ಮತದಾರರು ಹಾಗೂ 5,26,173 ಮಹಿಳಾ ಮತದಾರರಿದ್ದು ಒಟ್ಟು 10,16,245 ಮತದಾರರಿದ್ದಾರೆ. ಜಿಲ್ಲೆಯ ಲಿಂಗಾನುಪಾತ: 1074 ಬೆಂಗಳೂರು ಗ್ರಾಮಾಂತರದಲ್ಲಿ 14,90, 481 […]

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ

ಉಡುಪಿ: ಚುನಾವಣಾ ಆಯೋಗದ ನಿರ್ದೇಶನ ಅನ್ವಯ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 2023 ಜನವರಿ 1 ರ ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಐದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಜನವರಿ 5 ರಂದು ಎಲ್ಲಾ ಮತಗಟ್ಟೆಗಳಲ್ಲಿ, ಉಪ ವಿಭಾಗೀಯ, ತಾಲೂಕು ಕಚೇರಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ವೆಬ್‌ಸೈಟ್‌ನಲ್ಲಿ […]

ದೇಶೀಯ ವಲಸಿಗರ ಮತ ಚಲಾವಣೆಗಾಗಿ ರಿಮೋಟ್ ಇವಿಎಂ ಅಭಿವೃದ್ದಿ ಪಡಿಸಿದ ಚುನಾವಣಾ ಆಯೋಗ

ನವದೆಹಲಿ: ದೇಶಾದ್ಯಂತ ಕೆಲಸ ನಿಮಿತ್ತ ವಲಸೆ ಮಾಡುವ ವಲಸಿಗರು ತಮ್ಮ ಮತ ಚಲಾಯಿಸಲು ಊರಿಗೆ ಹಿಂದಿರುಗುವ ಸಮಸ್ಯೆಗಳನ್ನು ಒತ್ತಿಹೇಳುತ್ತಾ, ಚುನಾವಣಾ ಆಯೋಗವು ರಿಮೋಟ್ ಎಲೆಕ್ಟ್ರಾನಿಕ್ ಮತಯಂತ್ರವನ್ನು ಅಭಿವೃದ್ಧಿಪಡಿಸಿದೆ ಎಂದು ಗುರುವಾರ ಹೇಳಿದೆ. ತಾಂತ್ರಿಕ ಪ್ರಗತಿಯ ಯುಗದಲ್ಲಿ ವಲಸೆ ಆಧಾರಿತ ಹಕ್ಕು ನಿರಾಕರಣೆಯು ಒಂದು ಆಯ್ಕೆಯಾಗಿಲ್ಲ. 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ 67.4% ಮತದಾನವಾಗಿದೆ ಮತ್ತು 30 ಕೋಟಿಗೂ ಹೆಚ್ಚು ಮತದಾರರು ತಮ್ಮ ಮತವನ್ನು ಚಲಾಯಿಸದಿರುವ ಬಗ್ಗೆ ಮತ್ತು ವಿವಿಧ ರಾಜ್ಯಗಳು/ಕೇಂದ್ರಾಡಳಿತಗಳಲ್ಲಿ ವಿಭಿನ್ನ ಮತದಾರರ ಮತದಾನದ ಬಗ್ಗೆ ಭಾರತದ […]