ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸಲು ಮನವಿ
ಉಡುಪಿ : ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಣ್ಣದಿಂದ ತಯಾರಿಸಿರುವ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ, ಬಾವಿ ಹಾಗೂ ಇತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ನೀರು ಕಲುಷಿತವಾಗಿ, ಜಲಚರಗಳಿಗೆ ಹಾನಿಯುಂಟಾಗುತ್ತದೆ. ಇದನ್ನು ತಪ್ಪಿಸಲು ಜೇಡಿ ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ವಿಷಕಾರಿ ರಾಸಾಯನಿಕ, ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರಿಸ್‌ನ […]