ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿಗೆ ಇಡಿ ಸಮನ್ಸ್, ಜುಲೈ 21 ರಂದು ಹಾಜರಾಗಲು ಕೋರಿಕೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜುಲೈ 21 ರಂದು ಏಜೆನ್ಸಿಯ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ನೀಡಿದೆ. ಕೋವಿಡ್ -19 ರಿಂದ ಚೇತರಿಸಿಕೊಳ್ಳುವುದನ್ನು ಉಲ್ಲೇಖಿಸಿ ಸೋನಿಯಾ ಗಾಂಧಿ ಈ ಹಿಂದೆ ತನಿಖಾ ಸಂಸ್ಥೆಗೆ ಪತ್ರ ಬರೆದಿದ್ದರು. ಮೊದಲನೆ ನೋಟೀಸ್ ನೀಡಿದಾಗ ಸೋನಿಯಾ ಗಾಂಧಿಗೆ ಕೋವಿಡ್ ಪತ್ತೆ ಪರೀಕ್ಷೆಯಲ್ಲಿ ಸಂಕ್ರಮಣ ಇದೆ ಎಂದಾಗಿತ್ತು ಮತ್ತೆ ಆಕೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಜೂನ್ 23 ರಂದು ಹಾಜರಾಗಲು […]