ಪಾಲಿಗ್ರಾಫ್ ಪರೀಕ್ಷೆಗೆ ಸಿದ್ಧ ಎಂದ ಸುಕೇಶ್ ಚಂದ್ರಶೇಖರ್: ಸತ್ಯಪರೀಕ್ಷೆ ತೆಗೆದುಕೊಳ್ಳಲು ಮುಖ್ಯಮಂತ್ರಿ ಕೇಜ್ರಿವಾಲ್ ಗೂ ಪಂಥಾಹ್ವಾನ

ನವದೆಹಲಿ: ಬಹುಕೋಟಿ ವಂಚನೆ ಪ್ರಕರಣದ ಆರೋಪದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್ ಶುಕ್ರವಾರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ (ಎಲ್-ಜಿ) ವಿಕೆ ಸಕ್ಸೇನಾ ಅವರಿಗೆ ಬರೆದಿರುವ ಹೊಸ ಪತ್ರದಲ್ಲಿ, ತಮ್ಮ ಭ್ರಷ್ಟಾಚಾರದ ಆರೋಪಗಳನ್ನು ದೃಢೀಕರಿಸಲು ಪಾಲಿಗ್ರಾಫ್ ಪರೀಕ್ಷೆಗೆ ಒಪ್ಪಿಗೆ ನೀಡಿದ್ದಾರೆ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್ ಕೂಡಾ ತನ್ನ ಜೊತೆ ಪರೀಕ್ಷೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. “ಕೇಜ್ರಿವಾಲ್ ಜಿ, ಸುಳ್ಳು ಎಂದು ಅಳುವ ಬದಲು, ಪಾಲಿಗ್ರಾಫ್ ಪರೀಕ್ಷೆಗೆ ಒಪ್ಪಿಕೊಳ್ಳಲು ಎದೆಗಾರಿಕೆ ಮತ್ತು […]
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಯು ಕಾಂಗ್ರೆಸ್ ಜನತೆಗೆ ಬಗೆದ ಘೋರ ದ್ರೋಹವನ್ನು ಪುಷ್ಠೀಕರಿಸಿದೆ: ಜಿಲ್ಲಾ ಬಿಜೆಪಿ ಆರೋಪ

ಉಡುಪಿ: ‘ನೆಹರೂ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಹೆಸರಲ್ಲಿ ಮೂರು ನಾಲ್ಕು ತಲೆಮಾರಿಗೆ ಆಗುವಷ್ಟನ್ನು ನಾವು ಮಾಡಿಕೊಂಡಿದ್ದೇವೆ…’ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗಂಟಾಘೋಷದ ನುಡಿ ಮುತ್ತುಗಳು ಕಾಂಗ್ರೆಸ್ ಈ ದೇಶವನ್ನು ಲೂಟಿಗೈದು ದೇಶವಾಸಿಗಳಿಗೆ ಎಸಗಿರುವ ಅಕ್ಷಮ್ಯ ಘೋರ ದ್ರೋಹವನ್ನು ಪುಷ್ಠೀಕರಿಸಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಆರೋಪಿಸಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಮುಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿಚಾರಣೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯ ಸಂದರ್ಭದಲ್ಲಿ ಸ್ವತ: […]
ನೆಹರು-ಗಾಂಧಿ ಹೆಸರಲ್ಲಿ 3-4 ತಲೆಮಾರುಗಳಿಗಾಗುವಷ್ಟು ಹಣ ಸಂಪಾದನೆ ಮಾಡಿದ್ದೇವೆ: ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್

ಬೆಂಗಳೂರು: ಪಂಡಿತ್ ನೆಹರು, ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಹೆಸರಿನಲ್ಲಿ ನಾವು 3-4 ತಲೆಮಾರುಗಳಿಗಾಗುವಷ್ಟು ಸಂಪಾದಿಸಿದ್ದೇವೆ. ಈಗ ತ್ಯಾಗ ಮಾಡುವ ಸಮಯ ಬಂದಿದೆ. ಆ ಸಾಲವನ್ನು ತೀರಿಸಲು ನಾವು ಸಿದ್ಧರಿಲ್ಲದಿದ್ದರೆ, ನಾವು ತಿನ್ನುವ ಆಹಾರದಲ್ಲಿ ಹುಳುಗಳು ಬೀಳುತ್ತವೆ ಎಂದು ನಾನು ಹೆದರುತ್ತೇನೆ ಎಂದು ಸೋನಿಯಾ ಗಾಂಧಿ ವಿರುದ್ಧದ ಇಡಿ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಕಾಂಗ್ರೆಸ್ ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿದ್ದಾರೆ. ಗುರುವಾರದಂದು ಸೋನಿಯಾ ಗಾಂಧಿ ಇಡಿ ಮುಂದೆ ಹಾಜರಾಗಿದ್ದಾರೆ. ಸೋನಿಯಾ ಗಾಂಧಿ […]
ಕೇಂದ್ರದಿಂದ ರಾಹುಲ್ ಗಾಂಧಿ ವಿರುದ್ದ ಸುಳ್ಳು ಪ್ರಕರಣ ಸೃಷ್ಟಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಿ ಜಾರಿ ನಿರ್ದೇಶನಾಲಯ (ಇಡಿ)ದ ತನಿಖೆ ಹೆಸರಲ್ಲಿ ಸಂಸ್ಥೆಯ ದುರ್ಬಳಕೆ ಹಾಗೂ ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕರ ಮೇಲೆ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜೂನ್ 21, ಮಂಗಳವಾರದಂದು ಸಂಜೆ 4.00 ಗಂಟೆಗೆ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಎದುರು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಈ ಬೃಹತ್ ಪ್ರತಿಭಟನೆಯಲ್ಲಿ ಬ್ಲಾಕ್ […]
ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ: ಪಕ್ಷದಿಂದ ಮಾಹಿತಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಸ್ತುತ ಕೋವಿಡ್ ನಂತರದ ಇತರ ರೋಗಲಕ್ಷಣಗಳ ಜೊತೆಗೆ ಅವರ ಕೆಳ ಶ್ವಾಸೇಂದ್ರಿಯ ಪ್ರದೇಶದಲ್ಲಿ ಪತ್ತೆಯಾದ ಶಿಲೀಂಧ್ರಗಳ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯನ್ನು ನಿಕಟವಾಗಿ ಗಮನಿಸಲಾಗುತ್ತಿದೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.