ರಾಹುಲ್ ಗಾಂಧಿ ವಿಚಾರಣೆ, ಪಕ್ಷದ ನಾಯಕರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ವಿಚಾರಣೆ ಹಾಗೂ ಪಕ್ಷದ ನಾಯಕರುಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜೂನ್ 17 ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಕಂಟ್ರಿ ಇನ್ ಹೋಟೆಲ್ ಬಳಿ ಇರುವ ಸರ್ಕಲ್ ನಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ಜಿಲ್ಲೆಯ ಪಕ್ಷದ ನಾಯಕರುಗಳು, ಬ್ಲಾಕ್ ಅಧ್ಯಕ್ಷರು, ಮುಂಚೂಣಿ […]

ರಾಹುಲ್ ಗಾಂಧಿಗೆ ಇಡಿ ಸಮನ್ಸ್: ಮೋದಿ ಸರ್ಕಾರದಿಂದ ಇಡಿ ದುರ್ಬಳಕೆಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಇಡಿ ಪ್ರಶ್ನಿಸುವ ಮುನ್ನವೇ ಕೇಂದ್ರ ಸರ್ಕಾರದ ಇಡಿ ದುರ್ಬಳಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಜಮ್ಮು ಮತ್ತು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಇಂದು ರಾಹುಲ್ ಗಾಂಧಿ ವಿಚಾರಣೆಗಾಗಿ ಇಡಿ ಕಚೇರಿಗೆ ತೆರಳುವ ಸಾಧ್ಯತೆಯಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡಾ ರಾಹುಲ್ ಜೊತೆ ಇಡಿ ಕಚೇರಿಗೆ ಹೋಗಲಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಸತ್ಯ ಕಾ ಸಂಗ್ರಾಮ್’ ಮುಂದುವರೆಯಲಿದೆ ಎಂದು […]

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಹುಲ್‌ಗೆ ಇಡಿ ಸಮನ್ಸ್

  ನವದೆಹಲಿ: ಕಾಂಗ್ರೆಸ್ ಪಕ್ಷದ ಒಡೆತನದ ಮತ್ತು ಪಕ್ಷ ನಡೆಸುತ್ತಿರುವ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ನಿರ್ವಹಣೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ. 2013 ರಲ್ಲಿ ದೆಹಲಿಯ ವಿಚಾರಣಾ ನ್ಯಾಯಾಲಯದಲ್ಲಿ ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಅವರು ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನ ಮೇರೆಗೆ ಕಾಂಗ್ರೆಸ್ ನಾಯಕರ ವಿರುದ್ಧ ಐಟಿ ತನಿಖೆ […]